ಓಮ್ನಿ ಕಾರಿಗೆ ಇನೋವಾ ಡಿಕ್ಕಿ, ಸ್ಥಳದಲ್ಲೇ ನಾಲ್ವರು ಯುವಕರ ಸಾವು

0
130

ಹೆಚ್ಚಿನ ಓದುಗರು ಈ ಸುದ್ದಿಯನ್ನು ಖಂಡಿಸುವೆ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (1) ಅಭಿಪ್ರಾಯವಿಲ್ಲ (0)

ಯಲಹಂಕ, ಡಿ.5- ಚಲಿಸುತ್ತಿದ್ದ ಓಮ್ನಿ ಕಾರಿಗೆ ಇನೋವಾ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಯುವಕರು ಸ್ಥಳದಲ್ಲೇ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಏರ್ ಪೋರ್ಟ್ ರಸ್ತೆಯ ಕನ್ನಮಂಗಲ ಗೇಟ್ ಬಳಿ ಇಂದು ಬೆಳ್ಳಂ ಬೆಳಗ್ಗೆ ನಡೆದಿದೆ. ಆರ್‍ಟಿ ನಗರದ ನಿವಾಸಿಗಳಾದ ಸುಂದರೇಶ (25), ವೆಂಕಟೇಶ (24), ವಿಕಾಸ (25), ಆಶ್ರಿತ್ (25) ಮೃತಪಟ್ಟ ದುರ್ದೈವಿಗಳು.

ಹೂವಿನ ಅಲಂಕಾರ ಕೆಲಸ ಮಾಡುತ್ತಿದ್ದ ಈ ಯುವಕರು ಸ್ನೇಹಿತನ ಹುಟ್ಟುಹಬ್ಬ ಆಚರಣೆಗೆಂದು ಓಮ್ನಿ ಕಾರಿನಲ್ಲಿ ನಂದಿ ಬೆಟ್ಟಕ್ಕೆ ತೆರಳುತ್ತಿದ್ದಾಗ ಕನ್ನಮಂಗಲ ಗೇಟ್ ಬಳಿ ವೇಗವಾಗಿ ಬಂದ ಇನೋವಾ ಕಾರು ಓಮ್ನಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.

ಡಿಕ್ಕಿ ಹೊಡೆದ ರಭಸಕ್ಕೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದರೆ ಓಮ್ನಿ ಕಾರಿನಲ್ಲಿದ್ದ ಹೇಮಂತ್, ಅಜಿತ್, ರವಿ ಹಾಗೂ ಅವಿನಾಶ್, ಮನೋಜ್, ಭರತ್ ಗಂಭೀರವಾಗಿ ಗಾಯಗೊಂಡಿದ್ದು , ಚಿಕಿತ್ಸೆಗಾಗಿ ದೇವನಹಳ್ಳಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸಂಬಂಧ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಖಂಡಿಸುವೆ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (1) ಅಭಿಪ್ರಾಯವಿಲ್ಲ (0)