ಬೈಂದೂರು : ಲೋಕ ಸಭಾ ಸದಸ್ಯರ ಕಾರ್ಯಾಲಯ ಉದ್ಘಾಟನಾ ಸಮಾರಂಭ ಹಾಗೂ ಜನ ಸಂಪರ್ಕ ಸಭೆ

0
223

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (2) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

 

ಬೈಂದೂರು : ಲೋಕ ಸಭಾ ಸದಸ್ಯರ ಕಾರ್ಯಾಲಯ ಉದ್ಘಾಟನಾ ಸಮಾರಂಭ ಹಾಗೂ ಜನ ಸಂಪರ್ಕ ಸಭೆ ಬೈಂದೂರು ಪ್ರವಾಸಿ ಮಂದಿರದ ಆವರಣದಲ್ಲಿ ನಡೆಯಿತು.

ವಿಧಾನ ಪರಿಷತ್ತ ಪ್ರತಿಪಕ್ಷದ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿ ಮಾತನಾಡಿ ಜನಪ್ರತಿನಿಧಿಗಳು ಜನ ಸಾಮಾನ್ಯರ ಪ್ರತಿನಿಧಿಯಾಗಿ ಅವರವರ ಕ್ಷೇತ್ರಗಳಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು ಎನ್ನುವುದು ಸಂವಿಧಾನದ ಬದ್ಧವಾಗಿರುವ ಆಶಯ ಇವೆಲ್ಲವನ್ನು ಅರ್ಥಮಾಡಿಕೊಂಡು ಕೆಲಸ ಮಾಡಬೇಕು ಎಂದರು.

ಲೋಕಸಭಾ ಸದಸ್ಯರಾದ ಬಿ.ವೈ. ರಾಘವೇಂದ್ರ ಮಾತನಾಡಿ ಬೈಂದೂರಿನ ಮೂಲಭೂತ ಸೌಕರ್ಯ ಕೊರತೆಯಿದೆ ಅದರಲ್ಲೂ ನೀರಿಗೆ ಬರಗಾಲವಿದೆ ಅದನ್ನು ಜನರಿಗೆ ಪೂರೈಸುವ ಕೆಲಸ ಮಾಡತ್ತೇನೆ.ಹಾಗೂ ಬೈಂದೂರು ತಾಲೂಕು ಕೇಂದ್ರವಾಗಿದೆ. ತಾಲೂಕಿಗೆ ಇರಬೇಕಾದ ವ್ಯವಸ್ಥೆ ಇನ್ನೂ ಬರಬೇಕಾಗಿದೆ ಆ ದಿಕ್ಕಿನಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ಎನ್ನೆಲ್ಲಾ ಕೆಲಸವಾಗಬೇಕು ಅದನ್ನು ಕಾರ್ಯಗತಮಾಡಲು  ನಾನು ಪ್ರಯತ್ನ ಪಡುತ್ತೇನೆ ಹಾಗೂ ನಿಮ್ಮ ಸಹಕಾರಬೇಕು ಎಂದರು. ಉಡುಪಿ ಜಿಲ್ಲೆಯಲ್ಲೇ ಬೈಂದೂರು ತಾಲೂಕು ಅಭಿವೃದ್ಧಿ ಪಥದಲ್ಲಿ ಕೊಂಡಯ್ಯಲು ಸತತ ಪ್ರಯತ್ನ ಪಡುತ್ತೇನೆ ಎಂದರು.

ಈ ಸಂಧರ್ಭದಲ್ಲಿ  ಬೈಂದೂರು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ, ಕುಂದಾಪುರ ಸಹಾಯಕ ಕಮಿಷನರ್ ಭೂಬಾಲನ್ ಬೂಬಲಾನ್, ಕರ್ನಾಟಕ ವಿಧಾನಪರಿಷತ್ ಸದಸ್ಯ ರುದ್ರೆಗೌಡ, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿಂಧು, ಕುಂದಾಪು ಡಿವೈಎಸ್ಪಿ ದಿನೇಶ್ ಕುಮಾರ್, ಜಿಲ್ಲಾ ಅಧೀಕ್ಷರು, ಎಲ್ಲಾ ತಾಲೂಕು ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಸದಸ್ಯರು ಮತ್ತಿತರು ಉಪಸ್ಥಿತರಿದ್ದರು.

 

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (2) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)