ಬೈಂದೂರು; ಜ.18 ರಿಂದ 20ರ ತನಕ ರಾಜ್ಯ ಮಟ್ಟದ ಹೊನಲು ಬೆಳಕಿನ ಬೈಂದೂರು ಟ್ರೋಪಿ -2019

0
277

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (1) ಅಭಿಪ್ರಾಯವಿಲ್ಲ (0)

ಬೈಂದೂರು; ಬೈಂದೂರು ಸ್ಪೋಟ್ರ್ಸ್ ಕ್ಲಬ್(ರಿ.) ಬೈಂದೂರು ಇವರ ಆಶ್ರಯದಲ್ಲಿ ರಾಜ್ಯಮಟ್ಟದ ಹೊನಲು ಬೆಳಕಿನ 40 ಗಜಗಳ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾಟ ಬೈಂದೂರು  ಟ್ರೋಪಿ – 2019 ಜನವರಿ 18,19,20ರಂದು ಬೈಂದೂರು ಗಾಂಧಿ ಮೈದಾನದಲ್ಲಿ ನಡೆಯಲಿದೆ.

ಜ.18ರಂದು ಸಂಜೆ 7 ಗಂಟೆಗೆ ಮಾಜಿ ಸಚಿವರಾದ ಜಯಪ್ರಕಾಶ್ ಹೆಗ್ಡೆ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟವನ್ನು ಉದ್ಘಾಟಿಸಲಿದ್ದಾರೆ. ಚಿತ್ತೇರಿ ಡೆವಲಪರ್ಸ್ ಬೆಂಗಳೂರು ಇದರ ಮ್ಯಾನೇಜಿಂಗ್ ಡೈರೆಕ್ಟರ್ ಪಿ.ಸುಖಾನಂದ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ.

ಜ.20ರಂದು ಸಮಾರೋಪ ಸಮಾರಂಭದಲ್ಲಿ ಬೈಂದೂರು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಬಹುಮಾನ ವಿತರಿಸಲಿದ್ದಾರೆ ಹಾಗೂ ಮುಂತಾದ ಅತಿಥಿ ಗಣ್ಯರು ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಪ್ರಂದ್ಯಾಟದಲ್ಲಿ ಪ್ರಥಮ ಬಹುಮಾನ 1,11,111, ದ್ವಿತೀಯ: 66,666 ಹಾಗೂ ಸರಣಿಶ್ರೇಷ್ಟ,ಪಂದ್ಯ ಪುರುಷೋತ್ತಮ ಮುಂತಾದ ಪ್ರಶಸ್ತಿಗಳು ದೊರೆಯಲಿದೆ.ಎಲ್ಲಾ ಪಂದ್ಯಗಳ ನೇರಪ್ರಸಾರವನ್ನು ಕ್ರೀಕ್‍ಸೇ ಯೂ ಟ್ಯೂಬ್ ಚಾನೆಲ್‍ನಲ್ಲಿ ವೀಕ್ಷಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (1) ಅಭಿಪ್ರಾಯವಿಲ್ಲ (0)