ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 10 ಮಂದಿ ಸಾವು..!

0
675

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಗಾಂಧಿನಗರ: 2 ಲಾರಿ ಮತ್ತು ಎಸ್‍ಯುವಿ ಕಾರು ಮಧ್ಯೆ ಅಪಘಾತ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಒಂದೇ ಕುಟುಂಬದ 10 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಗುಜರಾತ್‍ನ ಕಚ್ ಜಿಲ್ಲೆಯ ಭಚೌ ಹೆದ್ದಾರಿಯಲ್ಲಿ ಭಾನುವಾರದಂದು ನಡೆದಿದೆ.

ಭಾನುವಾರ ಸಂಜೆ ಉಪ್ಪನ್ನು ಸಾಗಿಸುತ್ತಿದ್ದ ಲಾರಿಯೊಂದು ಹೆದ್ದಾರಿಯಲ್ಲಿದ್ದ ಡಿವೈಡರ್​ಗೆ ಡಿಕ್ಕಿ ಹೊಡೆದು ಬಳಿಕ ಪಕ್ಕದ ರಸ್ತೆಯಲ್ಲಿ ಬರುತ್ತಿದ್ದ ಎಸ್‍ಯುವಿ ಕಾರಿಗೆ ಡಿಕ್ಕಿ ಹೊಡೆಡಿದೆ. ಇದೇ ವೇಳೆ ಕಾರಿನ ಹಿಂದೆ ಇನ್ನೊಂದು ಲಾರಿ ಬಂದ ಪರಿಣಾಮ ಎರಡು ಲಾರಿಗಳ ನಡುವೆ ಕಾರು ಸಿಲುಕಿ ನಜ್ಜುಗುಜ್ಜಾಗಿದೆ.

ಕಾರಿನಲ್ಲಿ ಒಟ್ಟು 11 ಮಂದಿ ಪ್ರಯಾಣಿಸುತ್ತಿದ್ದು, 10 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಹಾಗೂ ಓರ್ವನ ಸ್ಥಿತಿ ಗಂಭೀರವಾಗಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದಲ್ಲಿ ಮೃತ ಪಟ್ಟವರೆಲ್ಲ ತಮ್ಮ ಹುಟ್ಟೂರು ಭಚ್‍ಗೆ ಹೊಸ ವರ್ಷ ಆಚರಿಸಲು ತೆರಳುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ.

ಈ ಘಟನೆ ಕುರಿತು ಪ್ರತಿಕ್ರಿಯಿಸಿದ ಗುಜರಾತ್‍ನ ಸಿಎಂ ವಿಜಯ್ ರೂಪಾಣಿ ಮೃತರ ಕುಟುಂಬಕ್ಕೆ ಪರಿಹಾರವನ್ನು ನೀಡಲಾಗುವುದು, ಯಾವುದೇ ಸಹಾಯ ಬೇಕಾದರೂ ಸರ್ಕಾರ ಮಾಡಲು ಸಿದ್ಧವಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಸಂತಾಪ ಸೂಚಿಸಿದ್ದಾರೆ.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)