ಶಬರಿಮಲೆ ದೇವಾಲಯ ಪ್ರವೇಶಿಸಿದ ಇಬ್ಬರು ಮಹಿಳೆಯರು

0
216

ಹೆಚ್ಚಿನ ಓದುಗರು ಈ ಸುದ್ದಿಯನ್ನು ಖಂಡಿಸುವೆ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (1) ಅಭಿಪ್ರಾಯವಿಲ್ಲ (0)

ತಿರುವನಂತಪುರಂ: 50 ವರ್ಷ ಮೀರದ ಇಬ್ಬರು ಮಹಿಳೆಯರು ಶಬರಿಮಲೆ ದೇವಾಲಯವನ್ನು ಪ್ರವೇಶಿಸಿ ಇತಿಹಾಸ ನಿರ್ಮಿಸಿದ್ದಾರೆ. 40 ವರ್ಷ ವಯಸ್ಸಿನ ಇಬ್ಬರು ಮಹಿಳೆಯರು ದೇವಾಲಯವನ್ನು ಇಂದು ಬೆಳಗ್ಗೆ ಪ್ರವೇಶಿಸಿದ್ದಾರೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.

ಮಧ್ಯರಾತ್ರಿ ಬೆಟ್ಟವನ್ನು ಹತ್ತಲು ಆರಂಭಿಸಿದ ಮಹಿಳೆಯರು ಇಂದು ಬೆಳಗ್ಗೆ 3.45ರ ವೇಳೆಗೆ ಅಯ್ಯಪ್ಪ ದೇವಾಲಯವನ್ನು ಪ್ರವೇಶಿಸಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ಮಹಿಳೆಯರಿಗೆ ಸಮವಸ್ತ್ರ ಧರಿಸಿದ್ದ ಪೊಲೀಸರು ರಕ್ಷಣೆ ನೀಡಿದ್ದಾರೆ.

ಡಿಸೆಂಬರ್ ನಲ್ಲಿ ಇಬ್ಬರು ಮಹಿಳೆಯರು ಶಬರಿಮಲೆ ಪ್ರವೇಶಿಸಿಲು ಪ್ರಯತ್ನ ನಡೆಸಿದ್ದರು. ಆದರೆ ಈ ವೇಳೆ ಭಾರೀ ಪ್ರತಿಭಟನೆ ನಡೆದ ಪರಿಣಾಮ ದೇವಾಲಯ ಪ್ರವೇಶಿಸುವ ನಿರ್ಧಾರದಿಂದ ಮಹಿಳೆಯರು ಹಿಂದಕ್ಕೆ ಸರಿದಿದ್ದರು.

ಸುಪ್ರೀಂ ಕೋರ್ಟ್ ಶಬರಿಮಲೆ ಪ್ರವೇಶಕ್ಕೆ ಮಹಿಳೆಯರಿಗೆ ಅನುಮತಿ ನೀಡಿದ ನಂತರ ಸಾಕಷ್ಟು ಹೋರಾಟಗಳು ನಡೆದಿತ್ತು. ಹಿಂದೂ ಸಂಘಟನೆಗಳು ತೀರ್ಪನ್ನು ವಿರೋಧಿಸಿ ಕೇರಳ ರಾಜ್ಯದಲ್ಲಿ ಪ್ರತಿಭಟನೆ ನಡೆಸಿದ್ದರೆ, ಮಹಿಳಾ ಪರ ಸಂಘಟನೆಗಳು ತೀರ್ಪನ್ನು ಸ್ವಾಗತಿಸಿತ್ತು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಖಂಡಿಸುವೆ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (1) ಅಭಿಪ್ರಾಯವಿಲ್ಲ (0)