ಮಾಂಸದಂಗಡಿಯಲ್ಲಿ ಜಿಂಕೆ ಮಾಂಸ ಪತ್ತೆ, ಒಬ್ಬ ಅರೆಸ್ಟ್

0
151

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಶಿವಮೊಗ್ಗ, ಜ. 9-ಮಾಂಸ ಮಾರಾಟ ಮಾಡುವ ಅಂಗಡಿಯಲ್ಲಿ ಜಿಂಕೆ ಮಾಂಸ ಪತ್ತೆಯಾಗಿರುವ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದ್ದು, ಈ ಸಂಬಂಧ ಓರ್ವನನ್ನು ಅರಣ್ಯ ಇಲಾಖೆ ಸಂಚಾರಿ ದಳದ ತಂಡ ಬಂಧಿಸಿರುವ ಘಟನೆ ವರದಿಯಾಗಿದೆ.

ಬೈಪಾಸ್ ರಸ್ತೆಯ ನ್ಯೂ ಮಂಡ್ಲಿ ಬಡಾವಣೆಯ ಸುಲ್ತಾನï ಮೊಹಲ್ಲಾದ 1 ಕ್ರಾಸ್‍ನಲ್ಲಿರುವ ಮಟನ್ ಅಂಗಡಿಯಲ್ಲಿ ಜಿಂಕೆ ಮಾಂಸ ಪತ್ತೆಯಾಗಿದೆ. ಈ ಸಂಬಂಧ ತೀರ್ಥಹಳ್ಳಿ ತಾಲೂಕು ಮಂಡಗದ್ದೆ ಸಮೀಪದ ಕಣಗಲ್ಕೊಪ್ಪದ ನಿವಾಸಿ ಸೈಯದ್ ಸಿರಾಜ್ (61) ಎಂಬಾತನನ್ನು ಸಂಚಾರಿ ದಳ ಬಂಧಿಸಿದೆ.

ಖಚಿತ ಮಾಹಿತಿ ಮೇರೆಗೆ ಈ ಕಾರ್ಯಾಚರಣೆ ನಡೆಸಿದ ಅರಣ್ಯ ಸಂಚಾರಿದಳ ಮಾಂಸದಂಗಡಿಯಲ್ಲಿದ್ದ ಜಿಂಕೆಯ ತಲೆ, ನಾಲ್ಕು ಕಾಲು, ಚರ್ಮವನ್ನು ವಶಕ್ಕೆ ಪಡೆದಿದ್ದಾರೆ. ತಲೆಮರೆಸಿಕೊಂಡಿರುವ ಮತ್ತೊಬ್ಬನಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಆರೋಪಿಗಳ ವಿರುದ್ದ ಅರಣ್ಯ ಸಂರಕ್ಷಣೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಅರಣ್ಯ ಸಂಚಾರಿ ದಳದ ಉಪ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್‍ನಾಯ್ಕ್ ಮಾರ್ಗದರ್ಶನದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಬಾಬುರಾವ್ ಪಾಟೀಲï, ವಲಯ ಅರಣ್ಯಾಧಿಕಾರಿ ಎ.ಆರ್.ಸಂಜಯï, ಉಪ ವಲಯ ಅರಣ್ಯಾಧಿಕಾರಿಗಳಾದ ಮಜೀದ್, ಎ.ಆರ್.ಹನುಮಂತರಾಯ, ಹಾಲಪ್ಪ, ವಸಂತಕುಮಾರ್, ಲಿಯೋಪುಡ್ತಾದ್ ಸಿಬ್ಬಂದಿ ಕಾರ್ಯಾಚರಣೆಯಲ್ಲಿದ್ದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)