ಕಾಲ್ತೋಡು: ಬಸ್ಸಿನ ಸೌಕರ್ಯವಿಲ್ಲದೇ ಪರದಾಡುತ್ತೀರುವ ವಿದ್ಯಾರ್ಥಿಗಳು

0
164

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (9) ಸಮ್ಮತ (1) ಅಸಮ್ಮತ (0) ಖಂಡಿಸುವೆ (1) ಅಭಿಪ್ರಾಯವಿಲ್ಲ (0)

ಕಾಲ್ತೋಡು ಹೆರಂಜಾಲು ಪ್ರದೇಶಗಳಿಗೆ ಸರಿಯಾದ ಬಸ್ಸಿನ ಸೌಕರ್ಯವಿಲ್ಲದೇ ಇಲ್ಲಿನ ಪ್ರಯಾಣಿಕರು, ಶಾಲಾ ಕಾಲೇಜು ವಿದ್ಯಾರ್ಥಿಗಳು ಸಾಕಷ್ಟು ಬವಣೆ ಪಡುತ್ತಿದ್ದಾರೆ. ಬೊಳ್ಳಂಬಳ್ಳಿಯಿಂದ ಬೆಳಿಗ್ಗೆ 7.45 ಹೊರಡುವ ಬಸ್ಸು ಕಾಲ್ತೋಡು ತಲಪುವಷ್ಟರಲ್ಲಿ ವಿದ್ಯಾರ್ಥಿಗಳಿಂದ ತುಂಬಿತುಳುಕುತ್ತದೆ ಪುಟ್‍ಬೋರ್ಡನಲ್ಲಿ ಕೂಡ ವಿದ್ಯಾರ್ಥಿಗಳು ನೇತಾಡಿಕೊಂಡು ಬರುತ್ತಾರೆ ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರು ಸಂಚರಿಸಲು ಹರಸಹಾಸ ಪಡಬೇಕಾದ ಅನಿವಾರ್ಯತೆ ಇದೆ.

ಈ ಪ್ರದೇಶದಲ್ಲಿ ಬೆರಳೆಣಿಕೆಯಷ್ಟು ಬಸ್ಸುಗಳು ಇರುವ ಹಿನ್ನಲೆಯಲ್ಲಿ ಕಾಲ್ತೋಡು, ಬೊಳ್ಳಂಬಳ್ಳಿ ಹೆರಂಜಾಲು ಮುಂತಾದ ಗ್ರಾಮೀಣ ಪ್ರದೇಶದಿಂದ ಪ್ರಯಾಣಿಸುವ ಪ್ರಯಾಣಿಕರು ವಿದ್ಯಾರ್ಥಿಗಳು ದಿನನಿತ್ಯ ಸಂಕಷ್ಟ ಎದುರಿಸುತ್ತಿದ್ದು ಈ ಬಗ್ಗೆ ಸ್ಥಳೀಯ ಜನಪ್ರತಿನಿಧಿಗಳು, ಇಲಾಖೆ ಅಧಿಕಾರಿಗಳಾಗಲಿ ಗಮನಹರಿಸುತ್ತಿಲ್ಲ.

ಸಾರಿಗೆ ವ್ಯವಸ್ಥೆಯಲ್ಲಿ ಕ್ರಾಂತಿ ಮಾಡಿದ್ದೆ ಎಂದು ಬಿಗುತ್ತಿರುವ ರಾಜ್ಯ ಸರ್ಕಾರ ಇನ್ನೂ ಗ್ರಾಮೀಣ ಪ್ರದೇಶದ ಸಾರಿಗೆ ವ್ಯವಸ್ಥೆ ಬಗ್ಗೆ ದಿವ್ಯ ನಿರ್ಲಕ್ಷ್ಯ ವಹಿಸಿರುವುದಂತೂ ಸತ್ಯ.

ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು, ಶಾಸಕರು, ಜಿಲ್ಲಾ ಪಂಚಾಯತ್ ಸದಸ್ಯರು ಎಚ್ಚೆತ್ತುಕೊಳ್ಳಲಿ ಎನ್ನುವುದು ಜನತೆಯ ಆಗ್ರಹ

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (9) ಸಮ್ಮತ (1) ಅಸಮ್ಮತ (0) ಖಂಡಿಸುವೆ (1) ಅಭಿಪ್ರಾಯವಿಲ್ಲ (0)