ಕುಡಿಯುವ ನೀರಿಗೆ ವಿಷ, ಮಹಿಳೆ ಬಲಿ

0
126

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಯಾದಗಿರಿ: ಕುಡಿಯುವ ನೀರಿಗೆ ಕ್ರಿಮಿನಾಶಕ ಸೇರ್ಪಡೆಯಾಗಿ ಮಹಿಳೆಯೊಬ್ಬರು ಸಾವು ಕಂಡ ದಾರುಣ ಘಟನೆ ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಮುದನೂರು(ಕೆ) ಗ್ರಾಮದಲ್ಲಿ ನಡೆದಿದೆ.

ನೀರು ಕುಡಿದು ಅಸ್ವಸ್ಥರಾಗಿ ಕೆಂಭಾವಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹೊನ್ನಮ್ಮ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮುದನೂರ ಗ್ರಾಮದಲ್ಲಿ ಬಾವಿ ನೀರನ್ನು ಕುಡಿಯಲು ಬಳಸಲಾಗುತ್ತಿತ್ತು. ಬಾವಿಗೆ ದುಷ್ಕರ್ಮಿಗಳು ಕ್ರಿಮಿನಾಶಕ ಬೆರೆಸಿದ್ದು, ಇದನ್ನು ತಿಳಿಯದ ಗ್ರಾಮದ ಕೆಲವರು ನೀರು ಕುಡಿದು ಅಸ್ವಸ್ಥರಾಗಿದ್ದಾರೆ.

ಪಂಪ್ ಆಪರೇಟರ್ ಮೌನೇಶ್ ಅವರ ತಾಯಿ ಹೊನ್ನಮ್ಮ ಸಾವನ್ನಪ್ಪಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಗ್ರಾಮಕ್ಕೆ ತೆರಳಿರುವ ಅಧಿಕಾರಿಗಳು, ಯಾರು ಬಾವಿ ನೀರು ಬಳಸದಂತೆ ಸೂಚಿಸಿದ್ದಾರೆ. ಟ್ಯಾಂಕರ್ ಮೂಲಕ ನೀರಿನ ವ್ಯವಸ್ಥೆ ಮಾಡಲಾಗಿದೆ. ಅಸ್ವಸ್ಥರಾದವರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)