ಕಾರು ಡಿವೈಡರ್‌ಗೆ ಡಿಕ್ಕಿ: ತಂದೆ- ಮಗ ಸಾವು

0
99

ಹೆಚ್ಚಿನ ಓದುಗರು ಈ ಸುದ್ದಿಯನ್ನು ಅಸಮ್ಮತ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (1) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ರಾಯಚೂರು: ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್​ಗೆ ಡಿಕ್ಕಿಯಾಗಿ ತಂದೆ, ಮಗ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿರುವ ದಾರುಣ ಘಟನೆ ಸಿಂಧನೂರಿನ ರಾಘವೇಂದ್ರ ರೈಸ್ ಮಿಲ್ ಬಳಿ ಶುಕ್ರವಾರ ನಡೆದಿದೆ.

ಹನೀಫ್ ಕುರೇಸಿ (60) ಹಾಗೂ ಅಬ್ದುಲ್ಲಾ (16) ಮೃತರು. ಅವಘಡದಲ್ಲಿ ಅಖ್ತರಾಬಾನು(50) ಹಾಗೂ ಅಬ್ದುಲ್ ಲತೀಫ (36) ಎಂಬುವರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರು ಚಾಲಕನ ನಿರ್ಲಕ್ಷ್ಯದಿಂದ ಕಾರು ಡಿವೈಡರ್​ಗೆ ಡಿಕ್ಕಿ ಹೊಡೆದಿದೆ ಎಂದು ಆರೋಪಿಸಲಾಗಿದೆ. ಘಟನಾ ಸ್ಥಳಕ್ಕೆ ಸಿಂಧನೂರು ಠಾಣಾ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ

ಹೆಚ್ಚಿನ ಓದುಗರು ಈ ಸುದ್ದಿಯನ್ನು ಅಸಮ್ಮತ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (1) ಖಂಡಿಸುವೆ (0) ಅಭಿಪ್ರಾಯವಿಲ್ಲ (0)