ಉಪ್ಪುಂದ ಜೆಸಿಐ ವತಿಯಿಂದ ಶಿವಕುಮಾರ ಸ್ವಾಮಿಗಳ ಆತ್ಮಕ್ಕೆ ಶಾಂತಿ ಕೋರಿ ಶ್ರದ್ಧಾಂಜಲಿ

0
641

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

 

ಜೆಸಿಐ ಉಪ್ಪುಂದದ ವತಿಯಿಂದ ನಡೆದಾಡುವ ದೇವರು, ಲಕ್ಷಾಂತರ ಬಡ ಮಕ್ಕಳ ಬಾಳಿನ ನಂದಾದೀಪ, ಶತಾಯುಷಿ, ಕರ್ನಾಟಕ ರತ್ಸಿದ್ದಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ಉಪ್ಪುಂದ ಸತ್ಯನಾರಾಯಣ ನೆಲಗಡಲೆ ಸಂಸ್ಕರಣಾ ಕೇಂದ್ರದ ಆವರಣದಲ್ಲಿ ಭಕ್ತಿ ಪೂರ್ವಕ ಶ್ರದ್ಧಾಂಜಲಿ ಸಭೆ ನಡೆಸಲಾಯಿತು.

ಉಪ್ಪುಂದ ಜೆಸಿಐ ಸದಸ್ಯರೆಲ್ಲರೂ ಸೇರಿ ಶಿವಾಕುಮಾರ ಸ್ವಾಮಿಗಳ ಭಾವಚಿತ್ರಕ್ಕೆ ಪುಸ್ಪಾರ್ಚನೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಿದರು.

ಪೂರ್ವಾಧ್ಯಕ್ಷ ರಾದ ರಾಮಕೃಷ್ಣ ದೇವಾಡಿಗರು ಮಾತನಾಡಿ ತ್ರಿವಿಧ ದಾಸೋಹಿ ಶಿವಕುಮಾರ ಮಹಾಸ್ವಾಮೀಜಿಗಳ ಅನನ್ಯ ಸೇವೆ ಪ್ರತಿಯೊಬ್ಬರಿಗೂ ಮಾದರಿ. ಅವರ ಲಿಂಗೈಕ್ಯದಿಂದ ನಾಡು ಬಡವಾಗಿದೆ. ಅವರು ನಡೆದ ದಾರಿಯಲ್ಲಿ ಪ್ರತಿಯೊಬ್ಬರು ಸಾಗಬೇಕು ಎಂದರು.
ಈ ಸಂದರ್ಭದಲ್ಲಿ ಜೆಸಿಐ ಅಧ್ಯಕ್ಷರಾದ ಪುರಂದರ್ ಖಾರ್ವಿ, ಸ್ಥಾಪಕಾಧ್ಯಕ್ಷರು, ಪೂರ್ವಾಧ್ಯಕ್ಷರು, ಜೆಸಿಐ ಸದಸ್ಯರೆಲ್ಲರೂ ಹಾಜರಿದ್ದರು.

ವರದಿ : ಪುರಷೋತ್ತಮ ಉಪ್ಪುಂದ

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)