ಎರಡು ಕಾರುಗಳು ಮುಖಾಮುಖಿ ಡಿಕ್ಕಿ: 12 ಮಂದಿ ದುರ್ಮರಣ, ಇಬ್ಬರು ಗಂಭೀರ ಗಾಯ

0
236

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಭೋಪಾಲ್: ರಸ್ತೆ ಅಪಘಾತದಲ್ಲಿ 12 ಮಂದಿ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಧ್ಯ ಪ್ರದೇಶದ ಉಜೈನ್ ಜಿಲ್ಲೆಯಲ್ಲಿ ನಡೆದಿದೆ.

ಉಜೈನ್ ನಲ್ಲಿ ಎರಡು ಕಾರುಗಳು ಮುಖಾಮುಖಿ ಡಿಕ್ಕಿಗೆ 12 ಮಂದಿ ಸಾವನ್ನಪ್ಪಿದ್ದಾರೆ. ಇಬ್ಬರು ಗಂಭೀರವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೃತರನ್ನು ತಿಲಕೇಶ್ವರ್ ಕಾಲೋನಿ ಮತ್ತು ಸುತ್ತಮುತ್ತಲಿನ ಪ್ರದೇಶಗಳ ನಿವಾಸಿಗಳು ಎಂದು ಗುರುತಿಸಲಾಗಿದೆ. ನಾಗ್ಡಾದಲ್ಲಿ ಮದುವೆಯ ಕಾರ್ಯಕ್ರಮಕ್ಕೆ ಹೋಗಿ ಹಿಂದಿರುಗುತ್ತಿದ್ದಾಗ ಉಜ್ಜಯನಿ ಬಳಿ ಈ ದುರ್ಘಟನೆ ಸಂಭವಿಸಿದೆ. ಈ ಅಪಘಾತಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಟ್ವೀಟ್ ಮಾಡಿದ್ದು, ಸಂತಾಪ ಸೂಚಿಸಿದ್ದಾರೆ.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)