ಪುಣೆಯ ಇಂದಪುರದಲ್ಲಿ ತರಬೇತಿ ವಿಮಾನ ಪತನ

0
261

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಮುಂಬೈ: ತರಬೇತಿ ವಿಮಾನವೊಂದು ಪುಣೆಯ ಇಂದಪುರದಲ್ಲಿ ಪತನಗೊಂಡಿದೆ.

ಕಾರ್ವರ್ ಏವಿಯೇಷನ್ (ಪೈಲಟ್ ತರಬೇತಿ ಕೇಂದ್ರ) ಸಂಸ್ಥೆಗೆ ಒಳಪಟ್ಟ ವಿಮಾನ ಇದಾಗಿದ್ದು, ತರಬೇತುದಾರ ಪೈಲಟ್ ಹಾರಾಟ ನಡೆಸುತ್ತಿದ್ದರು. ವಿಮಾನ ಪತನವಾಗುತ್ತಿದ್ದಂತೆ ಸ್ಥಳೀಯರು ಘಟನಾ ಸ್ಥಳಕ್ಕೆ ಆಗಮಿಸಿ ಗಾಯಗೊಂಡಿದ್ದ ಪೈಲಟ್ ನನ್ನು ರಕ್ಷಿಸಿದ್ದಾರೆ. ಗಾಯಾಳು ಪೈಲಟ್ ನನ್ನು ಬಾರಮತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಮಾನ ಪತನಕ್ಕೆ ಕಾರಣ ತಿಳಿದು ಬಂದಿಲ್ಲ.

ಫೆಬ್ರವರಿ 1ರಂದು ಬೆಂಗಳೂರಿನ ಹೆಚ್.ಎ.ಎಲ್. ಬಳಿ ತಾಂತ್ರಿಕ ದೋಷದಿಂದ ವಾಯುಪಡೆಯ ಮಿರಾಜ್-2000 ಯುದ್ಧ ವಿಮಾನ ಪತನಗೊಂಡು ಇಬ್ಬರು ಪೈಲಟ್‍ಗಳು ಮೃತಪಟ್ಟಿದ್ದರು. ಪ್ರಾಯೋಗಿಕ ಹಾರಾಟ ವೇಳೆ ಈ ಅವಘಡ ಸಂಭವಿಸಿದ್ದು, ರನ್‍ವೇಯಲ್ಲಿ ಹಾರಾಟ ನಡೆಸಿದ್ದ ವಿಮಾನ ಟೇಕಾಫ್ ಆಗಿದ್ದರೆ ವಸತಿ ಹೆಚ್ಚಾಗಿರುವ ಪ್ರದೇಶದಲ್ಲಿ ಬೀಳುವ ಸಾಧ್ಯತೆ ಇತ್ತು. ಆದರೆ ಇದನ್ನು ಮನಗಂಡ ಪೈಲಟ್‍ಗಳು ವಿಮಾನ ಎತ್ತರಕ್ಕೆ ಟೇಕಾಫ್ ಮಾಡದಿರಲು ನಿರ್ಧರಿಸಿ ಹೊರ ಬರಲು ಪ್ರಯತ್ನಿಸಿದ್ದರು.

ಅಂತಿಮ ಕ್ಷಣದಲ್ಲಿ ತಮ್ಮ ಪ್ರಾಣ ಉಳಿಸಿಕೊಳ್ಳುವ ಪ್ರಯತ್ನ ನಡೆಸಿದ್ದ ಪೈಲಟ್ ಗಳು ಪ್ಯಾರಚೂಟ್ ಬಳಸಿ ಹಾರಲು ಯತ್ನಿಸಿದ್ದರು. ಆದರೆ ಆ ವೇಳೆಗೆ ವಿಮಾನ ಸ್ಫೋಟಗೊಂಡಿತ್ತು. ಪರಿಣಾಮ ಸಿದ್ದಾರ್ಥ್ ನೇಗಿ (31), ಸಮೀರ್ ಅಬ್ರೋಲ್(33) ಹುತಾತ್ಮರಾಗಿದ್ದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)