ಉಪ್ಪುಂದ : ಜೇಸಿ ರಾಷ್ಟ್ರೀಯ ಭಾವೈಕ್ಯತಾ ದಿನಾಚರಣೆ

0
307

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

    

ಉಪ್ಪುಂದ : ಯುವ ಜನತೆಯಲ್ಲಿ ರಾಷ್ಟ್ರೀಯ ಭಾವೈಕ್ಯತೆಯನ್ನು ಪ್ರೇರೇಪಿಸುವ ಹಾಗೂ ಯುವ ಜನತೆಯನ್ನು ಸನ್ಮಾರ್ಗದಲ್ಲಿ ನಡೆಸುವಂತೆ ನೀತಿ ಭೋಧಿಸುವ ರಾಷ್ಟ್ರೀಯ ಭಾವೈಕ್ಯತಾ ದಿನಾಚರಣೆಯನ್ನು ಜೆಸಿಐ ಉಪ್ಪುಂದದ ವತಿಯಿಂದ ಸರಕಾರಿ ಪದವಿ ಪೂರ್ವ ಕಾಲೇಜು ಉಪ್ಪುಂದ ಸೇರಿ 42 ಶಾಲೆಗಳಲ್ಲಿ ಆಚರಿಸಲಾಯಿತು.

ಜೆಸಿಐ ಉಪ್ಪುಂದದ ಅಧ್ಯಕ್ಷರಾದ ಜೇಸಿ ಪುರುದಂರ ಖಾರ್ವಿ ಸಭಾಧ್ಯಕ್ಷತೆ ವಹಿಸಿದ್ದರು. ಜೇಸಿ ವಲಯ ತರಭೇತುದಾರರಾದ ಜೇಸಿ ಸುಬ್ರಮಣ್ಯ ಜಿ ರಾಷ್ಟ್ರೀಯ ಭಾವೈಕ್ಯತೆಯ ಮಹತ್ವವನ್ನು ವಿವರಿಸಿ ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ಭೋದಿಸಿದರು.

ಈ ಸಂದರ್ಭದಲ್ಲಿ ಜೇಸಿ ಸುನೀಲ್, ಉದಯ ಡಿಆರ್, ಜೇಸಿ ಸತೀಶ್ ಶೆಟ್ಟಿ ಹಾಗೂ ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು.

ಉಪಪ್ರಾಂಶುಪಾಲರಾದ ಶ್ರೀಮತಿ ಜಾನಕಿ ಎಮ್ ನಾಯಕ್ ಸ್ವಾಗತಿಸಿ ಪ್ರಾಸ್ತವಿಕ ಮಾತುಗಳನ್ನಾಡಿದರು, ದೈಹಿಕ ಶಿಕ್ಷಕರಾದ ಶ್ರೀಮತಿ ಸತ್ಯನಾರಾಯಣ ಮತ್ತು ಶ್ರೀಯುತ ಮಂಜುನಾಥ ಕಾರ್ಯಕ್ರಮ ನಿರ್ವಹಿಸಿದರು.

 ವರದಿ : ಪುರುಷೋತ್ತಮದಾಸ್ ಉಪ್ಪುಂದ

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)