61 ವರ್ಷದ ವೃದ್ಧನಿಂದ ಯುವತಿಗೆ ಲೈಂಗಿಕ ಕಿರುಕುಳ – ವೃದ್ಧ ಅರೆಸ್ಟ್

0
256

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಥಾಣೆ: ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಥಾಣೆಯಲ್ಲಿ 61 ವರ್ಷದ ವೃದ್ಧನನ್ನು ಪೊಲೀಸರು ಬಂಧಿಸಿದ್ದಾರೆ.

ವೃದ್ಧ ಸುಮಾರು ನಾಲ್ಕು ತಿಂಗಳಿನಿಂದ ಯುವತಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದನು. ಯುವತಿ ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಳು. ವೃದ್ಧ ನನಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾನೆ. ಆತನ ಕಿರುಕುಳ ತಳಲಾರದೇ ನಾನು ಸುಮಾರು ಕೆಲಸ ಬಿಡಬೇಕಾಯಿತು ಎಂದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾಳೆ.

ನಾನು ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ಆತ ನನ್ನ ಬಳಿ ಬಂದು ನನಗೆ ಅಸಭ್ಯವಾಗಿ ಮುಟ್ಟಿದ್ದಾನೆ. ಆಗ ನಾನು ನನ್ನ ಕೈಯಲ್ಲಿದ್ದ ಟಿಫಿನ್ ಬಾಕ್ಸ್ ಹಿಡಿದು ಆತನ ಮೇಲೆ ಹಲ್ಲೆ ಮಾಡಿದೆ ಎಂದು ಯುವತಿ ತಿಳಿಸಿದ್ದಾಳೆ.

ಯುವತಿ ಹಲ್ಲೆ ಮಾಡಿದ ನಂತರ ವೃದ್ಧ ಸ್ಥಳದಿಂದ ಪರಾರಿ ಆಗಲು ಯತ್ನಿಸಿದ್ದ. ಈ ವೇಳೆ ಸ್ಥಳದಲ್ಲಿದ್ದ ಜನರು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಯುವತಿ ಕೂಡ ಸ್ಥಳೀಯರ ಜೊತೆ ಪೊಲೀಸ್ ಠಾಣೆಗೆ ಹೋಗಿ ವೃದ್ಧನ ವಿರುದ್ಧ ದೂರು ದಾಖಲಿಸಿದ್ದಾಳೆ.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)