ಕುಂದಾಪುರ : ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗೆ ಚೂರಿ ಇರಿದ ಪ್ರಕರಣ – ಬೆಂಕಿ ಮಂಜ ಅರೆಸ್ಟ್

0
240

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (3) ಸಮ್ಮತ (0) ಅಸಮ್ಮತ (1) ಖಂಡಿಸುವೆ (1) ಅಭಿಪ್ರಾಯವಿಲ್ಲ (0)

ಕುಂದಾಪುರ : ಇತ್ತೀಚೆಗೆ ಕುಂದಾಪುರದ ಸರ್ಕಾರೀ ಜ್ಯೂನಿಯರ್ ಕಾಲೇಜು ಆವರಣದಲ್ಲಿ ಕಾಲೇಜಿನ ವಿದ್ಯಾರ್ಥಿಗೆ ಚೂರಿ ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಅಪ್ರಾಪ್ತ ಬಾಲಕ ಯಮನ ಸಹಚರನಾಗಿದ್ದ ಕೋಟೇಶ್ವರ ಸಮೀಪದ ಹಳೆಅಳಿವೆ ನಿವಾಸಿ ಮಂಜ ಅಲಿಯಾಸ್ ಬೆಂಕಿ ಮಂಜ ಎಂಬಾತನನ್ನು ಕುಂದಾಪುರ ಪೊಲಿಸರು ಬಂಧಿಸಿದ್ದಾರೆ. 

ಕುಂದಾಪುರದ ಜ್ಯೂನಿಯರ್ ಕಾಲೇಜು ಆವರಣದಲ್ಲಿ ಹುಡುಗಿ ವಿಚಾರದಲ್ಲಿ ತಕರಾರು ಹೆಚ್ಚಿ ಹೊಡೆದಾಟ ನಡೆದಿದ್ದು, ಇದೇ ದ್ವೇಷದ ಹಿನ್ನೆಲೆಯಲ್ಲಿ ನವೆಂಬರ್ 29ರಂದು ಬೆಳಿಗ್ಗೆ 9ಗಂಟೆಗೆ ಕಾಲೇಜಿಗೆ ಬರುತ್ತಿದ್ದ ಅನೂಪ್ ಎಂಬ ವಿದ್ಯಾರ್ಥಿಗೆ ಅಪ್ರಾಪ್ತ ಬಾಲಕ ಯಮ ಚೂರಿಯಿಂದ ಹಲವು ಬಾರಿ ಇರಿದು ಪರಾರಿಯಾಗಿದ್ದ. ಆರೋಪಿ ಯಮನನ್ನು ಕುಂದಾಪುರ ಪೊಲೀಸರು ವಶಕ್ಕೆ ಪಡೆದು ಬಾಲನ್ಯಾಯ ಮಂಡಳಿಗೆ ಹಾಜರುಪಡಿಸಿದ್ದರು. ಆತನ ವಿಚಾರಣೆ ನಡೆಸಿದ ಬಳಿಕ ಆತನಗಿಗೆ ಕೃತ್ಯ ನಡೆಸಲು ಕುಮ್ಮಕ್ಕು ನೀಡಿದ ಇತರ ಆರೋಪಿಗಳ ಬಗ್ಗೆ ಮಾಹಿತಿ ಕಲೆ ಹಾಕಿದ್ದರು.

ಪೋಲೀಸರು ಸಂಗ್ರಹಿಸಿದ ಮಾಹಿತಿ ಆಧಾರದ ಮೆಲೆ ಈಗ ಇನ್ನೋರ್ವ ಆರೋಪಿ ಬೆಂಕಿ ಮಂಜನನ್ನು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಕುಂದಾಪುರ ಪೊಲೀಸರು ಹೆಚ್ಚಿನ ತನಿಖೆ ಆರಂಭಿಸಿದ್ದಾರೆ.

 

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (3) ಸಮ್ಮತ (0) ಅಸಮ್ಮತ (1) ಖಂಡಿಸುವೆ (1) ಅಭಿಪ್ರಾಯವಿಲ್ಲ (0)