ಕಾಶ್ಮೀರದಲ್ಲಿ ಮಿಗ್-21 ಯುದ್ಧವಿಮಾನ ಪತನ, ಇಬ್ಬರು ಪೈಲೆಟ್ ಸಾವು

0
174

ಹೆಚ್ಚಿನ ಓದುಗರು ಈ ಸುದ್ದಿಯನ್ನು ಸಮ್ಮತ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (1) ಅಸಮ್ಮತ (0) ಖಂಡಿಸುವೆ (1) ಅಭಿಪ್ರಾಯವಿಲ್ಲ (0)

ಶ್ರೀನಗರ, ಫೆ.27- ಜಮ್ಮು-ಕಾಶ್ಮೀರದ ಬದ್ಗಾಮ್ ಜಿಲ್ಲೆಯ ಗಡಿಯಲ್ಲಿ ಗಸ್ತು ತಿರುಗುತ್ತಿದ್ದ ಭಾರತೀಯ ವಾಯುಪಡೆಯ ಮಿಗ್-21 ಯುದ್ಧವಿಮಾನ ಇಂದು ಬೆಳಗ್ಗೆ ಪತನಗೊಂಡಿದೆ. ಈ ದುರಂತದಲ್ಲಿ ಇಬ್ಬರು ಫೈಟರ್ ಜೆಟ್ ಪೈಲೆಟ್‍ಗಳು ಮೃತಪಟ್ಟಿದ್ದಾರೆ.

ಪುಲ್ವಾಮಾ ಭಯೋತ್ಪಾದಕರ ದಾಳಿ ನಂತರ ಪ್ರತೀಕಾರದ ಕ್ರಮವಾಗಿ ಭಾರತೀಯ ವಾಯುಪಡೆ ಪಾಕ್ ಆಕ್ರಮಿತ ಕಾಶ್ಮೀರದ ಬಾಲಕೋಟ್‍ಗೆ ನುಗ್ಗಿ ಜೈಷ್ ಉಗ್ರರ ಅಡಗುತಾಣ ಮತ್ತು ತರಬೇತಿ ಶಿಬಿರಗಳನ್ನು ಧ್ವಂಸಗೊಳಿಸಿತು.

ಇದಾದ ನಂತರ ಉದ್ಭವಿಸಬಹುದಾದ ಪರಿಸ್ಥಿತಿಯನ್ನು ನಿಭಾಯಿಸಲು ಭಾರತ-ಪಾಕ್ ಗಡಿಯಲ್ಲಿ ಮಿಗ್ ವಿಮಾನಗಳನ್ನು ಪಹರೆ ಮತ್ತು ಗಸ್ತು ಹಾರಾಟಕ್ಕೆ ನಿಯೋಜಿಸಲಾಗಿತ್ತು. ಇಂದು ಬೆಳಗ್ಗೆ ಗಸ್ತು ನಿರ್ವಹಣೆ ಕರ್ತವ್ಯದಲ್ಲಿದ್ದ ಮಿಗ್-21 ಯುದ್ಧ ವಿಮಾನ ತಾಂತ್ರಿಕ ದೋಷದಿಂದ ಬದ್ಗಾಮ್ ಜಿಲ್ಲೆಯ ಗಡಿ ಭಾಗದಲ್ಲಿ ಪತನಗೊಂಡಿತು.

ಈ ದುರ್ಘಟನೆಯಲ್ಲಿ ಇಬ್ಬರು ಪೈಲೆಟ್‍ಗಳು ಹುತಾತ್ಮರಾಗಿದ್ದಾರೆ. ಸ್ಥಳಕ್ಕೆ ಭಾರತೀಯ ವಾಯುಪಡೆಯ ಉನ್ನತಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ಈ ಘಟನೆ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಸಮ್ಮತ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (1) ಅಸಮ್ಮತ (0) ಖಂಡಿಸುವೆ (1) ಅಭಿಪ್ರಾಯವಿಲ್ಲ (0)