ಪಾಕಿಸ್ತಾನ ಝಿಂದಾಬಾದ್ ಎಂದು ಘೋಷಣೆ ಕೂಗಿ , ಮಲ್ಫೆ ಬೀಚ್ ಗೆ ಬಾಂಬ್ ಹಾಕುವುದಾಗಿ ಬೆದರಿಕೆ ಹಾಕಿದ್ದ ಯುವಕ ಅರೆಸ್ಟ್

0
131

ಹೆಚ್ಚಿನ ಓದುಗರು ಈ ಸುದ್ದಿಯನ್ನು ಖಂಡಿಸುವೆ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (1) ಅಭಿಪ್ರಾಯವಿಲ್ಲ (0)

ಉಡುಪಿ : ಮಲ್ಫೆ ಬೀಚ್ ಗೆ ಬಾಂಬ್ ಹಾಕುವುದಾಗಿ ಹೇಳಿಕೆ ನೀಡಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ತೊಟ್ಟಂನ ಸೃಜನ್ (18) ಬಂಧಿತ ಯುವಕ. ಸೃಜನ್ ನ ವಿಡಿಯೋ ಶುಕ್ರವಾರ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ವಿಡಿಯೋದಲ್ಲಿ ಯುವಕನು ಪಾಕಿಸ್ತಾನ್ ಜಿಂದಬಾದ್, ನಮ್ಮ ಮುಂದಿನ ಗುರಿ ಮಲ್ಪೆ ಎಂದು ಹೇಳಿದ್ದ. ಮಲ್ಪೆ ಬೀಚ್ ಗೆ ಬಾಂಬ್ ಹಾಕಲಾಗುವುದು, ಅಂಗಡಿಗಳೆಲ್ಲ ನಾಶವಾಗುತ್ತದೆ ನೋಡುತ್ತೀರಿ ಎಂದು ಯುವಕ ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಹೇಳಿಕೆ ನೀಡಿದ್ದ.

ಸಾರ್ವಜನಿಕರ ಮಾಹಿತಿ ಮೇರೆಗೆ ಉಡುಪಿ ಎಸ್ ಪಿ ನಿಶಾ ಜೇಮ್ಸ್ ತುರ್ತು ವಿಶೇಷ ತಂಡ ರಚಿಸಿ ಕಾರ್ಯಾಚರಣೆಗೆ ನಿರ್ದೇಶನ ನೀಡಿದರು. ಅದರಂತೆ ಪೊಲೀಸರು ವಿಡಿಯೋ ಹರಿಡಿದ ಬಗ್ಗೆ ಒಬ್ಬೊಬ್ಬರ ವಿಚಾರಣೆ ನಡೆಸಿ ಸೃಜನ್ ನನ್ನು ಬಂಧಿಸಿದ್ದಾರೆ. ಗಲಭೆ ಸೃಷ್ಟಿಸುವ ಉದ್ದೇಶದಿಂದಲೇ ವಿಡಿಯೋ ಮಾಡಲಾಗಿದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಖಂಡಿಸುವೆ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (1) ಅಭಿಪ್ರಾಯವಿಲ್ಲ (0)