ಸುಮಲತಾಗೆ `ಕೈ’ ಕೊಟ್ಟ ಕಾಂಗ್ರೆಸ್ – ಸ್ವತಂತ್ರವಾಗಿ ಸ್ಪರ್ಧೆ ಮಾಡಲು ಮುಂದಾದ ಸುಮಲತಾ ಅಂಬರೀಶ್!?

0
164

ಹೆಚ್ಚಿನ ಓದುಗರು ಈ ಸುದ್ದಿಯನ್ನು ಸಮ್ಮತ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (2) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

 

ಲೋಕಸಭಾ ಚುನಾವಣಾ ತಯಾರಿ ನಡೆದಿದ್ದು ಮಂಡ್ಯದಿಂದ ಸುಮಲತಾಗೆ ಟಿಕೆಟ್ ಕೊಡಲು ಸಾಧ್ಯವಿಲ್ಲ. ಮಂಡ್ಯವನ್ನು ಜೆಡಿಎಸ್‍ಗೆ ಬಿಟ್ಟು ಕೊಟ್ಟಿದ್ದೇವೆ. ಈಗಾಗಲೇ ಹಾಲಿ ಜೆಡಿಎಸ್ ಸಂಸದರಿದ್ದಾರೆ. ಹಾಲಿ ಜೆಡಿಎಸ್ ಸಂಸದರು ಇರುವಾಗ ಟಿಕೆಟ್ ಕೇಳಲು ಬರಲ್ಲ. ನಮ್ಮ ಪಕ್ಷದ ಆಂತರಿಕ ಸಮೀಕ್ಷೆಯಲ್ಲಿ ಕಾಂಗ್ರೆಸ್ ಮೈತ್ರಿ ಹೆಚ್ಚು ಸ್ಥಾನ ಗೆಲುವು ಸಾಧಿಸಲಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಈ ನಡುವೆ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಅವರು ಸ್ವತಂತ್ರವಾಗಿ ಸ್ಪರ್ಧೆ ಮಾಡಲು ಮುಂದಾಗಿದ್ದಾರೆ ಎನ್ನಲಾಗಿದೆ. ಮಂಡ್ಯದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ತಮ್ಮದೇ ಆದ ಮತದಾರರನ್ನು ಹೊಂದಿರುವ ರೈತ ಸಂಘ ಹಾಗೂ ಅಂಬರೀಶ್ ಅವರ ಅಭಿಮಾನಿಗಳ ಮತಗಳ ಮೇಲೆ ಸುಮಲತ ಅವರು ಗಮನದಲ್ಲಿ ಇಟ್ಟುಕೊಂಡು ಚುನಾವಣೆಗೆ ಕಣಕ್ಕೆ ಇಳಿಯಲಿದ್ದಾರೆ ಎನ್ನಲಾಗಿದೆ.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಸಮ್ಮತ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (2) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)