ಎರಡು ದಿನಗಳ ಹಿಂದಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದ ‘ರೌಡಿ ಲಕ್ಷ್ಮಣ ಬರ್ಬರ ಕೊಲೆ’

0
161

ಹೆಚ್ಚಿನ ಓದುಗರು ಈ ಸುದ್ದಿಯನ್ನು ಖಂಡಿಸುವೆ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (1) ಅಭಿಪ್ರಾಯವಿಲ್ಲ (0)

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಹಾಡಹಗಲೇ ರೌಡಿಗಳ ನಡುವೆ ಮಾರಾಮಾರಿ ನಡೆದಿದ್ದು, ನಟೋರಿಯಸ್ ರೌಡಿಶೀಟರ್ ಲಕ್ಷ್ಮಣನನ್ನು ಕೊಲೆ ಮಾಡಿರುವ ಘಟನೆ ರಾಜ್‍ಕುಮಾರ್ ರಸ್ತೆಯಲ್ಲಿ ನಡೆದಿದೆ.

ಮಚ್ಚಿನಿಂದ ಕೊಚ್ಚಿ ರೌಡಿಶೀಟರ್ ಲಕ್ಷ್ಮಣ ಕೊಲೆ ಮಾಡಿದ್ದಾರೆ. ಇಸ್ಕಾನ್ ಸಮೀಪದ ರನೈಜಾನ್ ಅಪಾರ್ಟ್ ಮೆಂಟ್ ಮುಂದೆ ಕೊಲೆ ಮಾಡಲಾಗಿದ್ದು, ಕಳೆದ ವಾರವಷ್ಟೇ ಲಕ್ಷ್ಮಣ ಜೈಲಿನಿಂದ ಹೊರಗೆ ಬಂದಿದ್ದನು. ಲ್ಯಾಂಡ್ ಗ್ರ್ಯಾಬಿಂಗ್ ಕೇಸ್ ನಲ್ಲಿ ಮೃತ ಲಕ್ಷ್ಮಣನನ್ನ ಸಿಸಿಬಿ ಪೊಲೀಸರು ಜೈಲಿಗೆ ಕಳಿಸಿದ್ದರು.

ರೌಡಿಶೀಟರ್ ಲಕ್ಷ್ಮಣ ಇನ್ನೋವಾ ಕಾರಲ್ಲಿ ಹೋಗುತ್ತಿದ್ದನು. ಈ ವೇಳೆ ಮತ್ತೊಂದು ಕಾರಿನಲ್ಲಿ ದುಷ್ಕರ್ಮಿಗಳ ಗ್ಯಾಂಗ್ ಬಂದು ಲಕ್ಷ್ಮಣನ ಇನ್ನೋವಾ ಕಾರಿಗೆ ಡಿಕ್ಕಿ ಹೊಡೆದಿದ್ದಾರೆ. ಬಳಿಕ ಮಚ್ಚು, ಲಾಂಗ್‍ಗಳಿಂದ ಲಕ್ಷ್ಮಣನ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ತಕ್ಷಣ ಗಾಯಗೊಂಡಿದ್ದ ಲಕ್ಷ್ಮಣನನ್ನು ಸ್ಥಳೀಯರು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದರು. ಆದರೆ ಆಸ್ಪತ್ರೆಗೆ ಹೋಗುವ ಮಾರ್ಗ ಮಧ್ಯೆಯೇ ಲಕ್ಷ್ಮಣ ಕೊನೆಯುಸಿರೆಳೆದಿದ್ದಾನೆ.

ಇನ್ನೂ ಘಟನೆ ನಡೆದ ಸ್ಥಳಕ್ಕೆ ಸುಬ್ರಹ್ಮಣ್ಯ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಖಂಡಿಸುವೆ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (1) ಅಭಿಪ್ರಾಯವಿಲ್ಲ (0)