ಬಿಲ್ಲವ ಸಮಾಜ ಸೇವಾ ಸಂಘ ಯಡ್ತರೆ ವಾರ್ಷಿಕೋತ್ಸವ,ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಗುರುಸಂದೇಶ ಜಾಥಾ

0
104

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಬೈಂದೂರು : ಬಿಲ್ಲವ ಸಮಾಜ ಸೇವಾ ಸಂಘ(ರಿ.)ಯಡ್ತರೆ ಬೈಂದೂರು ಇದರ ವಾರ್ಷಿಕೋತ್ಸವದ ಪ್ರಯುಕ್ತ ಸಾಮೂಹಿಕ ಸತ್ಯನಾರಾಯಣ ಪೂಜೆ,  ಭಜನಾ ಕಾರ್ಯಕ್ರಮ,ಗುರುಸಂದೇಶ ಜಾಥಾ ಕಾರ್ಯಕ್ರಮ ಬೈಂದೂರು ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನದಲ್ಲಿ ನಡೆಯಿತು.

ಯಡ್ತರೆ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ದೊಟ್ಟಯ್ಯ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿನಾರಾಯಣ ಗುರುಗಳ ತತ್ವ ಸಿದ್ದಾಂತಗಳು ಪ್ರತಿಯೊಬ್ಬರ ಬದುಕಿಗೂ ದಾರಿ ದೀಪವಾಗಿದೆ.ಶಿಕ್ಷಣ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಬೆಳವಣಿಗೆಯಾದಾಗ ಸಮುದಾಯದ ಅಭಿವೃದ್ದಿಯಾಗುತ್ತದೆ.ಕ್ರಿಯಾತ್ಮಕ ಚಿಂತನೆಗಳು ಹೊಸ ಯೋಜನೆಗಳಿಗೆ ಸಹಕಾರಿಯಾಗುತ್ತದೆ.ಯಡ್ತರೆ ಬಿಲ್ಲವ ಸಂಘದ ಕಾರ್ಯಕ್ರಮಗಳು ಮಾದರಿಯಾಗಿದೆ ಎಂದರು.

ವೇದಿಕೆಯಲ್ಲಿ ಜಿ.ಪಂ ಸದಸ್ಯ ಶಂಕರ ಪೂಜಾರಿ,ಮಾಜಿ ಜಿ.ಪಂ ಅಧ್ಯಕ್ಷ ರಾಜು ಪೂಜಾರಿ,ಯಡ್ತರೆ ಗ್ರಾ.ಪಂ ಉಪಾಧ್ಯಕ್ಷ ವೆಂಕ್ಟ ಪೂಜಾರಿ ಸಸಿಹಿತ್ಲು, ಬೈಂದೂರು ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಗಣೇಶ ಪೂಜಾರಿ, ಶಿವರಾಮ ಪೂಜಾರಿ ಯಡ್ತರೆ, ಗಣೇಶ್ ಎಲ್.ಹೊಸ್ಕೋಟೆ, ರಾಮ ಪೂಜಾರಿ, ಮುತ್ತಯ್ಯ ಪೂಜಾರಿ ಸಸಿಹಿತ್ಲು ಮೊದಲಾದವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ವತ್ತಿನಕಟ್ಟೆ ಮಹಾಸತಿ ದೇವಸ್ಥಾನದ ಪ್ರಧಾನ ಅರ್ಚಕ ಕೃಷ್ಣಮೂರ್ತಿ ನಾವಡರವರನ್ನು ಸಮ್ಮಾನಿಸಲಾಯಿತು ಹಾಗೂ ಎರಡು ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಶರ್ಮಿಳಾ ಯೋಜನಾನಗರ ರವರಿಗೆ ಸಂಘದ ವತಿಯಿಂದ ಧನಸಹಾಯ ನೀಡಲಾಯಿತು.

ಸಂಘದ ಪ್ರಧಾನ ಕಾರ್ಯದರ್ಶಿ ಕಿಶೋರ್ ಸಸಿಹಿತ್ಲು ಸ್ವಾಗತಿಸಿದರು.ಮಂಜುನಾಥ ಮತ್ತು ಪ್ರಭಾಕರ ಬಿಲ್ಲವ ಕಾರ್ಯಕ್ರಮ ನಿರ್ವಹಿಸಿದರು.ಗಣೇಶ ಪೂಜಾರಿ ವಂದಿಸಿದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)