ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ಪಲ್ಸ್ ಪೋಲಿಯೋ ಕಾರ್ಯಕ್ರಮ

0
61

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಬೆಳ್ಮಣ್ಣು ಪ್ರಾಥಮಿಕ ಆರೋಗ್ಯ ಕೇಂದ್ರ, ಹೊಸಮಾರು ಅಂಗನವಾಡಿ ಕೇಂದ್ರ, ಭಾರತ ಸರಕಾರದ ಯುವಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಉಡುಪಿ ಮತ್ತು ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ (ರಿ.)ನ ಸಹಯೋಗದಲ್ಲಿ ಬೆಳ್ಮಣ್ಣು ಹೊಸಮಾರು ಅಂಗನವಾಡಿ ಕೇಂದ್ರದಲ್ಲಿ 5 ವರ್ಷದ ಒಳಗಿನ ಮಕ್ಕಳಿಗೆ 2019ನೇ ಸಾಲಿನ ಪ್ರಥಮ ಹಂತದ ಪಲ್ಸ್ ಪೋಲಿಯೋ ಲಸಿಕೆ ಹಾಕುವ ಕಾರ್ಯಕ್ರಮ ಜರಗಿತು.

ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ (ರಿ.)ನ ಅಧ್ಯಕ್ಷರಾದ ನಂದಳಿಕೆ ರಾಜೇಶ್ ಕೋಟ್ಯಾನ್‍ರವರು ಮಗುವಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಸಂಘದ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಸದಸ್ಯರಾದ ಸತೀಶ್ ಪೂಜಾರಿ ಅಬ್ಬನಡ್ಕ, ಅಭಿಜಿತ್ ರಾವ್, ಸುಲೋಚನ ಕೋಟ್ಯಾನ್, ಪದ್ಮಶ್ರೀ ಪೂಜಾರಿ, ಬೆಳ್ಮಣ್ಣು ಪ್ರಾಥಮಿಕ ಆರೋಗ್ಯ ಕೇಂದ್ರದ ಆಶಾ ಕಾರ್ಯಕರ್ತೆ ಸುನೀತಾ ಮರಿಯಾನ್ ಪಿಂಟೋ, ಹೊಸಮಾರು ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಶ್ಯಾಮಲ ತಂತ್ರಿ, ಇಟ್ಟಮೇರಿ ಅಂಗನವಾಡಿ ಕಾರ್ಯಕರ್ತೆ ಕೊಲ್ಲು ಟೀಚರ್, ಬೋಳ ಗಂಗಾಧರ್ ಆಚಾರ್ಯ ಮೊದಲಾದವರು ಉಪಸ್ಥಿತಿತರಿದ್ದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)