ಮೋದಿಗೆ ಚುನಾವಣಾ ಆಯೋಗದಿಂದ ಕ್ಲೀನ್ ಚಿಟ್

0
192

ಹೆಚ್ಚಿನ ಓದುಗರು ಈ ಸುದ್ದಿಯನ್ನು ಅಸಮ್ಮತ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (1) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ನವದೆಹಲಿ: ಮಿಶನ್ ಶಕ್ತಿ (ಎ-ಸ್ಯಾಟ್) ಯಶಸ್ಸಿನ ಕುರಿತು ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಚುನಾವಣಾ ಆಯೋಗ ಕ್ಲೀನ್ ಚಿಟ್ ನೀಡಿದೆ. ಪ್ರಧಾನಿ ಮೋದಿ ನೀತಿ ಸಂಹಿತೆಯನ್ನು ಉಲ್ಲಂಘಿಸಿಲ್ಲ ಎಂದು ಚುನಾವಣಾ ಆಯೋಗ ಹೇಳಿದೆ.

ಭಾರತ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ವಿಜ್ಞಾನಿಗಳ ಸಾಧನೆ ಬಗ್ಗೆ ಪ್ರಧಾನಿ ಮೋದಿ ಮಾಡಿ ಭಾಷಣದಲ್ಲಿ ನೀತಿ ಸಂಹಿತೆ ಉಲ್ಲಂಘನೆಯ ಅಂಶಗಳಿಲ್ಲ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.

ಆಗಿದ್ದೇನು?: ಪ್ರಧಾನಿ ನರೇಂದ್ರ ಮೋದಿ ಎ- ಸ್ಯಾಟ್ ಯಶಸ್ಸಿನ ಕುರಿತು ದೇಶದ ಜನತೆಗೆ ಮಾಹಿತಿ ನೀಡಲು ದೇಶವನ್ನು ಉದ್ದೇಶಿಸಿ ಮಾರ್ಚ್ 27ರಂದು ಮಧ್ಯಾಹ್ನ ಭಾಷಣ ಮಾಡಿದ್ದರು. ಬಾಹ್ಯಾಕಾಶದಲ್ಲಿ ಕ್ಷಿಪಣಿ ಮೂಲಕ ಉಪಗ್ರಹವನ್ನು ಹೊಡೆದು ಉರುಳಿಸುವ ಸಾಮಥ್ರ್ಯವನ್ನು ಹೊಂದುವ ಮೂಲಕ ವಿಶ್ವದ ಇತಿಹಾಸದಲ್ಲಿ ಭಾರತ ವಿಶೇಷ ಸಾಧನೆ ಮಾಡಿದೆ. ಅಮೆರಿಕ, ರಷ್ಯಾ, ಚೀನಾದ ಬಳಿಕ ಉಪಗ್ರಹ ವಿರೋಧಿ ಅಸ್ತ್ರಗಳನ್ನು (ಆಂಟಿ-ಸ್ಯಾಟೆಲೈಟ್ ವೆಪನ್, ASAT) ಹೊಂದಿದ 4ನೇ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ. ಈ ಮೂಲಕ ವಿಶ್ವದ ಸ್ಪೇಸ್ ಸೂಪರ್ ಪವರ್ ದೇಶವಾಗಿ ಭಾರತದ ಹೊರಹೊಮ್ಮಿದೆ ಎಂದು ತಿಳಿಸಿದ್ದರು.

ಪ್ರಧಾನಿ ನರೇಂದ್ರ ಮೋದಿ ಅವರು ಭಾರತ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ವಿಜ್ಞಾನಿ ಮಾಡಿದ ಸಾಧನೆಯ ಬಗ್ಗೆ ಘೋಷಣೆ ಮಾಡುತ್ತಿದಂತೆ ಪ್ರತಿಪಕ್ಷಗಳು ವಾಗ್ದಾಳಿ ನಡೆಸಿದ್ದರು. ಚುನಾವಣೆಯ ಸಂದರ್ಭದಲ್ಲಿ ಇಂತಹ ಘೋಷಣೆ ಮಾಡಿದ್ದೇಕೆ ಎಂದು ಪ್ರಶ್ನೆ ಮಾಡಿದ್ದರು.

ದೇಶದ ವಿಜ್ಞಾನಿಗಳು ವರ್ಷಗಳ ಕಾಲ ಶ್ರಮ ವಹಿಸಿ ಮಾಡಿದ ಸಾಧನೆಯನ್ನು ಚುನಾವಣೆಗೆ ಕೇವಲ 2 ವಾರಗಳು ಬಾಕಿ ಇರುವ ವೇಳೆ ತಿಳಿಸಿದ್ದು ಎಷ್ಟು ಸರಿ ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿತ್ತು. `ಮಿಶನ್ ಶಕ್ತಿ’ ಮೋದಿ ಮಾಡಿದ ಸಾಧನೆ ಅಲ್ಲ. ಅಷ್ಟಕ್ಕೂ ಉಪಗ್ರಹವನ್ನು ನರೇಂದ್ರ ಮೋದಿ ಹಾರಿಸಿದ್ದಲ್ಲ. ಮೋದಿ ಸಾಧನೆ ಎಂದು ಸುಮ್ಮನೆ ಬಿಂಬಿಸಲಾಗ್ತಿದೆ. ವಿಜ್ಞಾನಿಗಳು ತಮ್ಮ ಕೆಲಸ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಲೇವಡಿ ಮಾಡಿದ್ದರು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಅಸಮ್ಮತ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (1) ಖಂಡಿಸುವೆ (0) ಅಭಿಪ್ರಾಯವಿಲ್ಲ (0)