ಸಿಆರ್ ಪಿಎಫ್ ವಾಹನಕ್ಕೆ ಗುದ್ದಿ ಕಾರು ಸ್ಫೋಟ!

0
649

ಹೆಚ್ಚಿನ ಓದುಗರು ಈ ಸುದ್ದಿಯನ್ನು ಸಮ್ಮತ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (1) ಅಸಮ್ಮತ (0) ಖಂಡಿಸುವೆ (1) ಅಭಿಪ್ರಾಯವಿಲ್ಲ (0)

ಶ್ರೀನಗರ: ಪುಲ್ವಾಮಾ ಮಾದರಿಯಲ್ಲಿ ಸಿಆರ್‍ಪಿಎಫ್ ವಾಹನಕ್ಕೆ ಕಾರು ಬಂದು ಡಿಕ್ಕಿ ಹೊಡೆದಿದೆ. ಜಮ್ಮು ಮತ್ತು ಕಾಶ್ಮೀರದ ರಾಷ್ಟ್ರೀಯ ಹೆದ್ದಾರಿ ಬನಿಹಾಲ್ ನಲ್ಲಿ ಈ ದಾಳಿ ನಡೆದಿದೆ.

ಸಿಆರ್‍ಪಿಎಫ್ ವಾಹನಕ್ಕೆ ಕಾರು ಡಿಕ್ಕಿ ಹೊಡೆದ ಬಳಿಕ ಚಾಲಕ ಅಲ್ಲಿಂದ ಪರಾರಿಯಾಗಿದ್ದಾನೆ ಎಂಬ ಮಾಹಿತಿಗಳು ಲಭ್ಯವಾಗಿದೆ. ಸ್ಫೋಟದ ತೀವ್ರತೆಗೆ ಕಾರು ಸಂಪೂರ್ಣ ಧ್ವಂಸಗೊಂಡಿದೆ. ಇನ್ನು ಸಿಆರ್‍ಪಿಎಫ್ ವಾಹನದಲ್ಲಿ ನಮ್ಮ ಸೈನಿಕರು ಇದ್ರಾ ಎಂಬುದರ ಬಗ್ಗೆ ಇನ್ನಷ್ಟೇ ಮಾಹಿತಿ ಲಭ್ಯವಾಗಬೇಕಿದೆ.

ಮೇಲ್ನೋಟಕ್ಕೆ ಇದು ಭಯತ್ಪೋದಾನಾ ದಾಳಿಯ ರೀತಿಯಲ್ಲಿ ಕಾಣಿಸುತ್ತಿಲ್ಲ. ಕಾರಿನಲ್ಲಿದ್ದ ಸಿಲಿಂಡರ್ ಸ್ಫೋಟದಿಂದ ಈ ಅವಘಡ ಸಂಭವಿಸಿದೆ. ಸ್ಫೋಟದ ಸ್ಥಳದಿಂದ ಸಿಆರ್ ಪಿಎಫ್ ವಾಹನ ತುಂಬಾ ದೂರದಲ್ಲಿ ನಿಂತಿತ್ತು ಎಂಬ ಮಾತುಗಳು ಕೇಳಿ ಬರುತ್ತಿದೆ.

ಫೆ.14ರಂದು ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಪಾಕ್ ಮೂಲದ ಜೈಷ್-ಇ-ಮೊಹಮ್ಮದ್ ಉಗ್ರರು ನಡೆಸಿದ ಆತ್ಮಾಹುತಿ ದಾಳಿಯಲ್ಲಿ ಸಿಆರ್‍ಪಿಎಫ್‍ನ 40 ಯೋಧರು ಹುತಾತ್ಮರಾಗಿದ್ದರು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಸಮ್ಮತ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (1) ಅಸಮ್ಮತ (0) ಖಂಡಿಸುವೆ (1) ಅಭಿಪ್ರಾಯವಿಲ್ಲ (0)