ಬೈಂದೂರು ಹೋಲಿಕ್ರಾಸ್ ಆಂಗ್ಲಮಾಧ್ಯಮ ಶಾಲೆಯಲ್ಲಿ ಪದವಿ ಪ್ರಧಾನ ಕಾರ್ಯಕ್ರಮ

0
213

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (2) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಬೈಂದೂರು : ಹೋಲಿಕ್ರಾಸ್ ಆಂಗ್ಲಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ ಪೂರ್ವ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಕಾರ್ಯಕ್ರಮ ಜರುಗಿತು.

ಬೈಂದೂರಿನ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಜ್ಯೋತಿ ಶ್ರೀನಿವಾಸರವರು ವಿದ್ಯಾರ್ಥಿಗಳಿಗೆ ಪದವಿ ಪ್ರಧಾನಗೈದರು.
ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಹಸಿರು ದಿನಾಚರಣೆ, ಜನಪದ ದಿನಾಚರಣೆ, ಗುಲಾಬಿ ದಿನಾಚರಣೆಯ ಸ್ಪರ್ಧಾ ವಿಜೇತರಿಗೆ ಬಹುಮಾನವನ್ನು ಹಸ್ತಾಂತರಿಸಲಾಯಿತು.

ವೇದಿಕೆಯಲ್ಲಿ ಸಿಸ್ಟರ್ ನ್ಯಾನ್ಸಿ, ಸಿಸ್ಟರ್ ಸಹಾಯ, ಶಾಲಾ ಅಭಿವೃದ್ದಿ ಸಮಿತಿಯ ಅಧ್ಯಕ್ಷ ದೇನಿಯಲ್ ನಜ್ರತ್, ತಲ್ಲೂರು ಜಯರಾಣಿ, ಶಲಾ ಮುಖ್ಯ ಶಿಕ್ಷಕಿ ಸಿಸ್ಟರ್ ಲೀಲಾರವರು ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕ ಸಿಸ್ಟರ್ ಜ್ಯೋತಿ ಸ್ವಾಗತಿಸಿದರು. ವಿದ್ಯಾರ್ಥಿಗಳಾದ ಆಧ್ಯಾ, ಮೇಲಿಶಾ, ಶರ್ವಿನ್ ನಿರೂಪಿಸಿದರು, ಶಿಕ್ಷಕಿ ವಿದ್ಯಾ ವಂದಿಸಿದರು.

      

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (2) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)