ಮಂಡ್ಯದಲ್ಲಿ ಹೊತ್ತುರಿದ ಖಾಸಗಿ ಬಸ್, ಅದೃಷ್ಟವಶಾತ್ ಪ್ರಯಾಣಿಕರು ಪಾರು

0
166

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಮಂಡ್ಯ : ಖಾಸಗಿ ಬಸ್ ಒಂದು ಹೊತ್ತು ಉರಿದು ಅದೃಷ್ಟವಶಾತ್ ಪ್ರಯಾಣಿಕರು ಅಪಾಯದಿಂದ ಪಾರಾಗಿರುವ ಘಟನೆ ಮಂಡ್ಯದಲ್ಲಿ ಇಂದು(ಏ.13) ಬೆಳಗಿನ ಜಾವ ನಡೆದಿದೆ.

ಚಾಲಕನ ಸಮಯ ಪ್ರಜ್ಞೆಯಿಂದ ಬಸ್ಸಿನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರು ಅದೃಷ್ಟವಶಾತ್ ಬದುಕುಳಿದಿದ್ದಾರೆ.

ಆದರೆ ಬಸ್ ಸಂಪೂರ್ಣವಾಗಿ ಭಸ್ಮವಾಗಿದೆ. ಒಂದೊಮ್ಮೆ ಪ್ರಯಾಣಿಕರು ಅದರಲ್ಲಿದ್ದಿದ್ದರೆ ಸಜೀವ ದಹನವಾಗುತ್ತಿದ್ದರು. ಈ ಅನಾಹುತ ಶ್ರೀರಂಗಪಟ್ಟಣ ತಾಲೂಕಿನ ಗಣಂಗೂರು ಬಳಿ ಸಂಭವಿಸಿದೆ.

ಬಸ್ ಕೇರಳದ ವಯನಾಡಿನಿಂದ ಬೆಂಗಳೂರಿಗೆ ಬರುತ್ತಿತ್ತು ಎನ್ನಲಾಗಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರ ಬ್ಯಾಗ್ ಸೇರಿದಂತೆ ಬೆಲೆ ಬಾಳುವ ವಸ್ತುಗಳು ಬೆಂಕಿಗಾಹುತಿಯಾಗಿದೆ.

ಮೈಸೂರು-ಬೆಂಗಳೂರು ಹೆದ್ದಾರಿಯ ಗಣಂಗೂರು ಬಳಿ ಘಟನೆ ನಡೆದಿದ್ದು, ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ಚಾಲಕ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ತಕ್ಷಣವೇ ಕೆಳಗೆ ಇಳಿಸಿದ್ದಾರೆ.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)