ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್‍ರವರ 128ನೇ ಜನ್ಮದಿನಾಚರಣೆ

0
158

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)


ಪ್ರತಿಯೊಬ್ಬ ಭಾರತೀಯನೂ ಆತ್ಮ ಗೌರವದಿಂದ ಬದುಕಬೇಕೆಂಬುದು ಪ್ರಬುದ್ಧ ಭಾರತದ ಕನಸು ಕಂಡ ಸಂವಿಧಾನ ಶಿಲ್ಪಿ ಮಹಾಪುರುಷ ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್‍ರವರ ಕನಸಾಗಿತ್ತು. ಬ್ರಿಟಿಷರ ಆಳ್ವಿಕೆಯಿಂದ ಬಿಡುಗಡೆ ಪಡೆದ ಭಾರತವು ನಿಜವಾಗಿಯೂ ಸ್ವತಂತ್ರ ದೇಶವಾಗಬೇಕಾದರೆ ಜಾತೀಯತೆ ಮತ್ತು ಬಡತನದಿಂದ ಬಿಡುಗಡೆ ಪಡೆಯಬೇಕೆನ್ನುವುದು ಅವರ ದ್ಯೇಯವಾಗಿತ್ತು ಎಂದು ಕನ್ನಡ ಸಾಹಿತ್ಯ ಪರಿಷತ್ತು ಬೆಳ್ಮಣ್ಣು ಹೋಬಳಿ ಘಟಕದ ಅಧ್ಯಕ್ಷ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ ಹೇಳಿದರು.

ಭಾರತ ಸರಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ ಹಾಗೂ ನೆಹರು ಯುವ ಕೇಂದ್ರ ಉಡುಪಿ, ನಂದಳಿಕೆ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಬೆಳ್ಮಣ್ಣು ಹೋಬಳಿ ಘಟಕದ ವತಿಯಿಂದ ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ಸಂಘದ ರಂಗಮಂದಿರದಲ್ಲಿ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್‍ರವರ ಭಾವಚಿತ್ರಕ್ಕೆ ನಂದಳಿಕೆ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಅಧ್ಯಕ್ಷ ನಂದಳಿಕೆ ರಾಜೇಶ್ ಕೋಟ್ಯಾನ್‍ರವರು ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಡಾ. ಬಿ.ಆರ್.ಅಂಬೇಡ್ಕರ್‍ರವರ 128ನೇ ಜನ್ಮದಿನಾಚರಣೆ ಕಾರ್ಯಕ್ರಮ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ನಂದಳಿಕೆ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಕಾರ್ಯದರ್ಶಿ ನಂದಳಿಕೆ ಪ್ರಶಾಂತ್ ಪೂಜಾರಿ, ಉಪಾಧ್ಯಕ್ಷರಾದ ಹರೀಶ್ ಪೂಜಾರಿ, ಸದಸ್ಯರಾದ ಅಬ್ಬನಡ್ಕ ಸತೀಶ್ ಪೂಜಾರಿ, ಬಾಲಕೃಷ್ಣ ಮಡಿವಾಳ, ಲಲಿತಾ ಆಚಾರ್ಯ, ಹರಿಣಾಕ್ಷಿ ಪೂಜಾರಿ, ಸುಲೋಚನಾ ಕೋಟ್ಯಾನ್, ವೀಣಾ ಪೂಜಾರಿ, ಪುಷ್ಪ ಕುಲಾಲ್ ಮೊದಲಾದವರು ಉಪಸ್ಥಿತಿತರಿದ್ದರು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)