‘ಬಿ.ವೈ. ರಾಘವೇಂದ್ರ ಸೋತರೆ ರಾಜಕೀಯ ನಿವೃತ್ತಿ’

0
105

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಶಿವಮೊಗ್ಗ: ಶಿವಮೊಗ್ಗ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಗೆಲ್ಲುವುದು ನೂರಕ್ಕೆ ನೂರರಷ್ಟು ಖಚಿತವಾಗಿದೆ ಎಂದು ಬಿಜೆಪಿ ಶಾಸಕ ಹರತಾಳು ಹಾಲಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸಾಗರ ತಾಲೂಕಿನ ಮರಸೂರು ಲಿಂಗದಹಳ್ಳಿ ಗ್ರಾಮದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ರಾಘವೇಂದ್ರ ಗೆಲ್ಲಲಿದ್ದಾರೆ. ಒಂದು ವೇಳೆ ಅವರು ಸೋತರೆ ರಾಜಕೀಯ ನಿವೃತ್ತಿ ಪಡೆಯುವುದಾಗಿ ಘೋಷಿಸಿದ್ದಾರೆ.

ಅಧಿಕಾರ ಇದ್ದ ಸಂದರ್ಭದಲ್ಲಿ ಸಮಸ್ಯೆಯನ್ನು ಬಗೆಹರಿಸಲು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಮತ್ತು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಪ್ರಯತ್ನ ನಡೆಸಲಿಲ್ಲ. ಈಗ ಸಮಸ್ಯೆಗೆ ಬಿಜೆಪಿಯನ್ನು ಹೊಣೆ ಮಾಡುತ್ತಿರುವುದು ಅವರ ಬೇಜವಾಬ್ದಾರಿಯನ್ನು ತೋರಿಸುತ್ತದೆ ಎಂದು ಟೀಕಿಸಿದ್ದಾರೆ.

ಅಭ್ಯರ್ಥಿ ಬಿ.ವೈ. ರಾಘವೇಂದ್ರ ಮಾತನಾಡಿ, ಈ ಚುನಾವಣೆಯಲ್ಲಿ ಅಭಿವೃದ್ಧಿಯೇ ಪ್ರಮುಖ ವಿಷಯವಾಗಿದೆ. ಅಭಿವೃದ್ಧಿಯ ಚಿಂತನೆ ಇರುವ ಬಿಜೆಪಿಗೆ ಹೆಚ್ಚಿನ ಬೆಂಬಲ ದೊರಕಲಿದೆ ಎಂದು ಹೇಳಿದ್ದಾರೆ.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)