ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ.77.25 ದಾಖಲೆ ಮತದಾನ

0
96

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಮಂಗಳೂರು, ಏಪ್ರಿಲ್ 19:ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 8 ವಿಧಾನಸಭಾ ಕ್ಷೇತ್ರದಲ್ಲಿ ಶಾಂತಿಯುತವಾಗಿ ಮತದಾನ ಅಂತ್ಯಗೊಂಡಿದೆ. ಕೆಲವೆಡೆ ಇವಿಎಂಗಳಲ್ಲಿ ದೋಷ, ಸಣ್ಣ ಪುಟ್ಟ ಮಾತಿನ ಚಕಮಕಿ, ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಘರ್ಷಣೆ, ವಿವಿ ಪ್ಯಾಟ್ ಗಳಲ್ಲಿ ಪ್ರಿಂಟರ್ ಸಮಸ್ಯೆ ಹೊರತುಪಡಿಸಿದರೆ ಶಾಂತಿಯುತವಾಗಿ ಮತದಾನ ಅಂತ್ಯ ಗೊಂಡಿದೆ.

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಗುರುವಾರ (ಏ.18)ಮುಂಜಾನೆಯಿಂದಲೇ ಬಿರುಸಿನ ಮತದಾನ ನಡೆದಿದ್ದು, ಅತಿ ಹೆಚ್ಚು ಮತದಾನ ದಾಖಲಾಗಿದೆ.ಪ್ರಸಕ್ತ ಸಾಲಿನ ಲೋಕಸಭಾ ಚುನಾವಣೆಯಲ್ಲಿ ಶೇ.77.78 ಮತದಾನವಾಗುವ ಮೂಲಕ ಕಳೆದ ಸಾಲಿನ ದಾಖಲೆಯನ್ನು ಮುರಿದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಬೆಳ್ತಂಗಡಿಯಲ್ಲಿ ಶೇ.80.92, ಮೂಡಬಿದ್ರೆ ಶೇ.76.06, ಬಂಟ್ವಾಳ ಶೇ. 80.31, ಪುತ್ತೂರು ಶೇ.82.30 ಸುಳ್ಯ ಶೇ.84.16, ಮಂಗಳೂರು ಉತ್ತರ ( ಸುರತ್ಕಲ್) ಶೇ.74.83, ಮಂಗಳೂರು ದಕ್ಷಿಣ ಶೇ. 69.15 ಹಾಗೂ ಮಂಗಳೂರು ವಿಧಾನ ಸಭಾ ಕ್ಷೇತ್ರದಲ್ಲಿ ಶೇ.75.64 ಮತದಾನ ದಾಖಲಾಗಿದೆ.

2014ರ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಶೇ 76.67 ಮತದಾನ ದಾಖಲಾಗಿತ್ತು. ಆದರೆ ಈ ಬಾರಿ ಅದಕ್ಕಿಂತ ಹೆಚ್ಚು ಅಂದರೆ ಶೇ 77.78 ಮತದಾನ ವಾಗಿದೆ. ಅದೇ 2009ರ ಲೋಕಸಭಾ ಚುನಾವಣೆಯಲ್ಲಿ ಶೇ. 74.46 ಮತದಾನವಾಗಿತ್ತು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)