ಫಲಿತಾಂಶದ ಬಳಿಕ `ಎಲ್ಲಿದ್ದೀಯಪ್ಪಾ ಅನಂತ್ ಕುಮಾರ್’ ಎಂದು ಕೇಳಬೇಕಾಗುತ್ತದೆ : ಹೆಗ್ಡೆಗೆ ಸಿಎಂ ಹೆಚ್ಡಿಕೆ ಟಾಂಗ್!

0
106

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಕಾರವಾರ : ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನಿಖಿಲ್ ಬಹುಮತದಿಂದ ಗೆಲುವು ಸಾಧಿಸುತ್ತಾನೆ. ಈಗ ಎಲ್ಲಿದ್ದೀಯಪ್ಪಾ ಆನಂದ್ ಎಂದು ಟ್ರೋಲ್ ಮಾಡುತ್ತಿದ್ದಾರೆ. ಚುನಾವಣೆ ಮುಗಿದ ಬಳಿಕ ಇವರೆಲ್ಲಾ ಎಲ್ಲಿರ್ತಾರೆ ನೋಡಬೇಕು ಎಂದು ಸಚಿವ ಅನಂತ್ ಕುಮಾರ್ ಹೆಗ್ಡೆಗೆ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ.

ಕುಮುಟಾದಲ್ಲಿ ನಡೆದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಆನಂದ್ ಅಸ್ನೋಟಿಕರ್ ಪರ ಪ್ರಚಾರದಲ್ಲಿ ಮಾತನಾಡಿದ ಸಿಎಂ ಹೆಚ್.ಡಿಕೆ, ಹಿಂದೂ ಧರ್ಮವನ್ನು ಉಳಿಸುವವನು ನಾನೇ ಎಂದು ಹೇಳುವ ವ್ಯಕ್ತಿ ಅನಂತ್ ಕುಮಾರ್ ಏ. 18 ರ ನಂತರ ನಿಖಿಲ್ ಎಲ್ಲಿದ್ದೀಯಪ್ಪಾ ಎಂದು ಕೇಳುತ್ತಿದ್ದಾರೆ. ಚುನಾವಣೆಯಲ್ಲಿ ನಿಖಿಲ್ ಹೆಚ್ಚಿನ ಬಹುಮತದಿಂದ ಗೆಲುವು ಸಾಧಿಸುತ್ತಾನೆ ಈಗ ಆನಂದ್ ಎಲ್ಲಿದ್ದೀಯಪ್ಪಾ ಎಂದು ಟ್ರೋಲ್ ಮಾಡುತ್ತಿದ್ದಾರೆ. ಮೇ. 23 ರ ನಂತರ ಎಲ್ಲಿದ್ದೀಯಪ್ಪಾ ಅನಂತ್ ಕುಮಾರ್ ಎಂದು ಕೇಳಬೇಕಾಗುತ್ತದೆ ಎಂದು ಅನಂತ್ ಕುಮಾರ್ ಹೆಗ್ಡೆಗೆ ಟಾಂಗ್ ನೀಡಿದರು.

ಮೊದಲ ಹಂತದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲುತ್ತಾರೆ ಎಂದು ಸಿಎಂ ಹೆಚ್.ಡಿಕೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)