ಎಂಜಿನಿಯರಿಂಗ್ ವಿದ್ಯಾರ್ಥಿನಿ ಮಧು ಸಾವಿನ ಪ್ರಕರಣ: ಶಂಕಿತ ಆರೋಪಿ ಬಂಧನ

0
141

ಹೆಚ್ಚಿನ ಓದುಗರು ಈ ಸುದ್ದಿಯನ್ನು ಖಂಡಿಸುವೆ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (1) ಖಂಡಿಸುವೆ (2) ಅಭಿಪ್ರಾಯವಿಲ್ಲ (0)

ರಾಯಚೂರು: ಎಂಜಿನಿಯರಿಂಗ್ ವಿದ್ಯಾರ್ಥಿನಿ ಮಧು ಪತ್ತಾರ್ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಶಂಕಿತ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಸುದರ್ಶನ ಯಾದವ್ (26) ಎಂದು ಗುರುತಿಸಲಾಗಿದೆ.

ಬಂಧಿತನ ವಿಚಾರಣೆಯನ್ನು ಪೊಲೀಸರು ನಡೆಸುತ್ತಿದ್ದು ಮತ್ತೊಂದೆಡೆ ಮೃತಳ ಶವದ ಮರಣೋತ್ತರ ಹೆಚ್ಚುವರಿ ಪರೀಕ್ಷೆಗೆ ಕಲಬುರಗಿಗೆ ದೇಹದ ಕೆಲ ಭಾಗದ ಮಾದರಿ ಕಳಿಸಿಕೊಡಲಾಗಿದೆ.

ಕಳೆದ ಕೆಲ ದಿನಗಳ ಹಿಂದೆ ವಿದ್ಯಾರ್ಥಿನಿ ಮಧು ಪತ್ತಾರ್ ಶವ ಅನುಮಾನಾಸ್ಪದ ರೀತಿಯಲ್ಲಿ ನಗರದ ಉಸುಕಿನ ಹುನುಮಾನ್ ದೇವಸ್ಥಾನದ ಬಳಿಯ ಗುಡ್ಡದಲ್ಲಿ ಸುಟ್ಟ ಗಾಯಗಳಿಂದ ಕೂಡಿದ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪೊಲೀಸರಿಗೆ ಪತ್ತೆಯಾಗಿತ್ತು.

ಪೋಲೀಸರು ಇದನ್ನು ಆತ್ಮಹತ್ಯೆ ಕೇಸ್ ಎಂದು ದಾಖಲಿಸಿಕೊಂಡಿದ್ದು ಮೃತಳ ಪಾಲಕರು ಇದೊಂದು ಕೊಲೆ ಎಂದು ನೇತಾಜಿ ನಗರ ಠಾಣೆಗೆ ದೂರಿತ್ತಿದ್ದಾರೆ.

ಪ್ರಕರಣದ ವಿಚಾರಣೆ ಚುರುಕುಗೊಳಿಸಿರುವ ಪೊಲೀಸರು ಗುರುವಾರ ರಾತ್ರಿ ಶಂಕಿತ ಆರೋಪಿ ಸುದರ್ಶನ ಯಾದವ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಖಂಡಿಸುವೆ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (1) ಖಂಡಿಸುವೆ (2) ಅಭಿಪ್ರಾಯವಿಲ್ಲ (0)