ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ

0
415

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ವಾರಣಾಸಿ, ಏಪ್ರಿಲ್ 26: ಇಡೀ ದೇಶದ ಕುತೂಹಲಕ್ಕೆ ಕಾರಣವಾಗಿದ್ದ ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ.

ಈ ಸಂದರ್ಭದಲ್ಲಿ ಎನ್ ಡಿಎ ಮೈತ್ರಿಕೂಟದ ನಾಯಕರಾದ ಜೆಡಿಯು ನಾಯಕ ನಿತೀಶ್ ಕುಮಾರ್, ಶಿವಸೇನೆ ನಾಯಕ ಉದ್ಧವ್ ಠಾಕ್ರೆ, ಎಲ್ ಜೆಪಿ ನಾಯಕ ರಾಮ್ ವಿಲಾಸ್ ಪಾಸ್ವಾನ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ನಾಮಪತ್ರ ಸಲ್ಲಿಕೆಗೂ ಮುನ್ನ ಮೋದಿ ಅವರು ಈ ಮೂಲಕ ಎನ್ ಡಿಎ ಮೈತ್ರಿಕೂಟದ ಶಕ್ತಿ ಪ್ರದರ್ಶನವನ್ನೂ ಮಾಡಿದ್ದಾರೆ. ಮೊದಲಿಗೆ ಬಿಜೆಪಿ ಕಾರ್ಯಕರ್ತರನ್ನುದ್ದೇಶಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಬೆಳಿಗ್ಗೆ 11:40ಕ್ಕೆ ನಾಮಪತ್ರ ಸಲ್ಲಿಸಿದರು.

ಅದಕ್ಕೂ ಮುನ್ನ ಎನ್ ಡಿಎ ಮುಖಂಡರೊಂದಿಗೆ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಸಭೆ ನಡೆಸಿದರು. ವಾರಣಾಸಿ ಕ್ಷೇತ್ರದಲ್ಲಿ ಕೊನೆಯ ಹಂತದಲ್ಲಿ ಅಂದರೆ ಮೇ 19 ರಂದು ಚುನಾವಣೆ ನಡೆಯಲಿದ್ದು, ಮೇ 23 ಕ್ಕೆ ಫಲಿತಾಂಶ ಹೊರಬೀಳಲಿದೆ. ಮೋದಿ ನಾಮಪತ್ರ ಸಲ್ಲಿಕೆಯ ಕುರಿತ ಕ್ಷಣಕ್ಷಣದ ಮಾಹಿತಿಯನ್ನು ‘ಒನ್ ಇಂಡಿಯಾ ಕನ್ನಡ’ ನೀಡಲಿದೆ.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)