ಶೀಘ್ರವೇ ಬರಲಿದೆ 20 ರೂ. ಹೊಸ ನೋಟು

0
233

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಶೀಘ್ರವೇ ನಿಮಗೆ ಹೊಸ 20 ರೂಪಾಯಿ ನೋಡಲು ಸಿಗಲಿದೆ. ಆರ್.ಬಿ.ಐ. ಶುಕ್ರವಾರ ಹೊರಡಿಸಿರುವ ಅಧಿಸೂಚನೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿದೆ. ಆರ್.ಬಿ.ಐ. ಹೊಸ 20 ರೂಪಾಯಿ ಬಣ್ಣ ಸೇರಿದಂತೆ ಎಲ್ಲದರ ಬಗ್ಗೆ ಮಾಹಿತಿ ನೀಡಿದೆ.

ಹೊಸ 20 ರೂಪಾಯಿಯಲ್ಲಿ ಆರ್.ಬಿ.ಐ. ಗವರ್ನರ್ ಶಕ್ತಿಕಾಂತ್ ದಾಸ್ ಸಹಿಯಿರಲಿದೆ. ಜೊತೆಗೆ ದೇಶದ ಸಂಸ್ಕೃತಿ ಬಿಂಬಿಸುವ ಎಲ್ಲೋರು ಗುಹೆಗಳ ಚಿತ್ರವಿರಲಿದೆ. ಮಹಾತ್ಮಾ ಗಾಂಧಿ ಸರಣಿಯ ಹೊಸ ನೋಟಿನ ಜೊತೆ ಹಳೆ 20 ರೂಪಾಯಿ ನೋಟು ಕೂಡ ಚಾಲ್ತಿಯಲ್ಲಿರಲಿದೆ ಎಂದು ಆರ್.ಬಿ.ಐ. ಹೇಳಿದೆ.

ಆರ್.ಬಿ.ಐ. ನೀಡಿದ ಮಾಹಿತಿ ಪ್ರಕಾರ, 20 ರೂಪಾಯಿ ಹೊಸ ನೋಟಿನ ಮುಂಭಾಗದ ಮಧ್ಯದಲ್ಲಿ ಮಹಾತ್ಮಾಗಾಂಧಿ ಫೋಟೋ ಇರಲಿದೆ. ಹಿಂದಿ ಹಾಗೂ ಇಂಗ್ಲೀಷ್ ಅಂಕೆಯಲ್ಲಿ ನೋಟಿನ ಮೌಲ್ಯವಿರಲಿದೆ. ನೋಟಿನ ಬಣ್ಣ ಹಸಿರು ಮಿಶ್ರಿತ ಹಳದಿಯಾಗಿರಲಿದೆ.ಹಿಂದಿನ ಭಾಗದಲ್ಲಿ ಗುಹೆಯ ಚಿತ್ರವಿರಲಿದೆ. ನೋಟು 63 ಎಂಎಂ ಅಗಲ ಹಾಗೂ 129 ಮಿಮಿ ಉದ್ದವಿರಲಿದೆ.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)