ಎಸ್‍ಎಸ್‍ಎಲ್‍ಸಿ ಫಲಿತಾಂಶ : ಶುಭದಾ ಆಂಗ್ಲಮಾಧ್ಯಮ ಪ್ರೌಡಶಾಲೆ ಶೇ. 100 ಫಲಿತಾಂಶ

0
156

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (6) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಕಿರಿಮಂಜೇಶ್ವರ : ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಕಿರಿಮಂಜೇಶ್ವರ ಶುಭದಾ ಆಂಗ್ಲಮಾಧ್ಯಮ ಪ್ರೌಡಶಾಲೆಯ ವಿದ್ಯಾರ್ಥಿಗಳು ಅದ್ವೀತಿಯ ಸಾಧನೆ ಮಾಡಿದ್ದಾರೆ. 2018-19ನೇ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿದೆ.

ಪರೀಕ್ಷೆಗೆ ಹಾಜರಾದ ಒಟ್ಟು 32 ವಿದ್ಯಾರ್ಥಿಗಳಲ್ಲಿ 12 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿ, 18 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಹಾಗೂ ಇಬ್ಬರು ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.

ಕುಮಾರಿ ಮೇಘನಾ ಜಿ 605, ಕುಮಾರಿ ನಿಕಿಶಾ 601 ಹಾಗೂ ಕುಮಾರಿ ರಚನಾ 590 ಅಂಕಗಳಿಸಿ ಶಾಲಾಮಟ್ಟದಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನವನ್ನು ತಮ್ಮದಾಗಿಸಿಕೊಂಡಿದ್ದಾರೆ.

ಕುಮಾರಿ ಮೇಘನಾ ಜಿ ಕನ್ನಡದಲ್ಲಿ 125 ಅಂಕ, ಕುಮಾರಿ ನಿಕಿಶಾ ಕನ್ನಡದಲ್ಲಿ 125, ಹಿಂದಿಯಲ್ಲಿ 100 ಅಂಕ, ಕುಮಾರಿ ರಚನಾ ಕನ್ನಡದಲ್ಲಿ 125, ಇಂಗ್ಲೀಷ್‍ನಲ್ಲಿ 100 ಅಂಕ, ಹಾಗೂ ಕುಮಾರಿ ಸ್ಮಿತಾ ಕನ್ನಡದಲ್ಲಿ 125 ಅಂಕ ಗಳಿಸಿರುತ್ತಾರೆ.

ಶಾಲಾ ಅಧ್ಯಕ್ಷರಾದ ಡಾ.ಎನ್.ಕೆ.ಬಿಲ್ಲವ ಹಾಗೂ ಆಡಳಿತ ಮಂಡಳಿಯ ಸದಸ್ಯರು ಮುಖೋಪಾಧ್ಯಾಯ ಶ್ರೀ ರವಿದಾಸ ಶೆಟ್ಟಿ ಹಾಗೂ ಸಿಬ್ಬಂದಿ ವರ್ಗ ವಿದ್ಯಾರ್ಥಿಗಳನ್ನು ಅಭಿನಂಧಿಸಿರುತ್ತಾರೆ.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (6) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)