ಬೈಂದೂರು, ಪಡುವರಿ, ಯಡ್ತರೆಯ ಕುಡಿಯುವ ನೀರಿನ ಸಮಸ್ಯೆ ನಿವಾರಿಸುವಂತೆ ಶಾಸಕರಿಗೆ ರಾಹುತೇಶ್ವರ ಗೆಳೆಯರ ಬಳಗದಿಂದ ಮನವಿ

0
182

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (11) ಸಮ್ಮತ (3) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ರಾಹುತೇಶ್ವರ ಗೆಳೆಯರ ಬಳಗ (ರಿ) ರಾಹುತನಕಟ್ಟೆಯ ಸದಸ್ಯರು ಬೈಂದೂರು ಕ್ಷೇತ್ರದ ಶಾಸಕರಾದ ಮಾನ್ಯ ಬಿ.ಎಂ ಸುಕುಮಾರ ಶೆಟ್ಟಿಯವರನ್ನು ಭೇಟಿ ಮಾಡಿ ಯಡ್ತರೆ, ಪಡುವರಿ, ಬೈಂದೂರು ಗ್ರಾಮಗಳ ಬಹುಕಾಲದ ಕುಡಿಯುವ ನೀರಿನ ಸಮಸ್ಯೆಯನ್ನು ನಿವಾರಿಸಲು ಮನವಿ ಮಾಡಿದರು.

ಮಾನ್ಯ ಶಾಸಕರು ಸಕರಾತ್ಮಕವಾಗಿ ಸ್ಪಂದಿಸಿ ಸುಬ್ಬಾರಡಿ ಬಳಿ ವೆಂಟೆಡ್ ಡ್ಯಾಂ ನ್ನು ನಿರ್ಮಿಸಿಯೇ ಸಿದ್ದ ಎನ್ನುವ ಭರವಸೆಯನ್ನು ನೀಡುವುದರೊಂದಿಗೆ ಬಹುಕಾಲದ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರವನ್ನು ನೀಡುತ್ತೇನೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶಂಕರ ಪೂಜಾರಿ, ರೈತ ಸಂಘದ ಅಧ್ಯಕ್ಷರಾದ ದೀಪಕ್ ಕುಮಾರ್ ಶೆಟ್ಟಿ, ಖ್ಯಾತ ಜ್ಯೋತಿಷಿಗಳಾದ ಡಾ|| ಮಹೇಂದ್ರ ಭಟ್, ರಾಹುತೇಶ್ವರ ಗೆಳೆಯರ ಬಳಗದ ಅಧ್ಯಕ್ಷರಾದ ಮಂಜುನಾಥ ಕಾರ್ಯದರ್ಶಿ ನಾಗರಾಜ್ ಹಾಗೂ ಬಳಗದ ಸರ್ವಸದಸ್ಯರು ಉಪಸ್ಥಿತರಿದ್ದರು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (11) ಸಮ್ಮತ (3) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)