ರಾಯಚೂರು ಘಟನೆ ಮಾಸುವ ಮುನ್ನವೇ, ಹಾವೇರಿಯಲ್ಲಿ ಮತ್ತೊಬ್ಬ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಕೊಲೆ.!

0
44

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಹಾವೇರಿ : ರಾಯಚೂರಿನ ಇಂಜಿನಿಯರ್ ವಿದ್ಯಾರ್ಥಿನಿ ಮಧು ಪತ್ತಾರ್ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಮಾಸುವ ಮುನ್ನವೇ, ಮತ್ತೊಂದು ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಪ್ರಕರಣ, ಹಾವೇರಿಯಲ್ಲಿ ಬೆಳಕಿಗೆ ಬಂದಿದೆ.

ಹಾವೇರಿ ಜಿಲ್ಲೆಯ ಶಿಗ್ಗಾಂವಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ, ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಆರೋಪಿಗಳು, ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ಕಳೆದ ನಿನ್ನೆ ಅತ್ಯಾಚಾರ ಮತ್ತು ಕೊಲೆ ಮಾಡಲ್ಪಟ್ಟ ಬಾಲಕಿ, ಬೇರೆ ಊರಿನಿಂದ ಸಾಮೂಹಿಕ ಕಾರ್ಯಕ್ರಮಕ್ಕಾಗಿ ಪಕ್ಕದ ಊರಿಗೆ ಆಗಮಿಸಿದ್ದರು. ಈ ವೇಳೆ ತಡರಾತ್ರಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ದುಷ್ಕರ್ಮಿಗಳು, ಕತ್ತು ಹಿಸುಕಿ ಹತ್ಯೆ ಮಾಡಿದ್ದಾರೆ.

ಈ ಬಗ್ಗೆ ಹಾವೇರಿಯ ಶಿಗ್ಗಾಂ ಪೊಲೀಸ್ ಠಾಣೆಯಲ್ಲಿ ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)