ಮಂಗಳೂರಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 1 ಕೋಟಿ ರೂ. ಹಣ ವಶ..!

0
92

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಮಂಗಳೂರು,ಮೇ 17- ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಒಂದು ಕೋಟಿ ರೂ. ವಶಪಡಿಸಿಕೊಂಡಿರುವ ಮಂಗಳೂರು ಬಂದರು ಪೊಲೀಸರು ಬೆಂಗಳೂರು ಮೂಲದ ವ್ಯಕ್ತಿಯನ್ನು ಇಂದು ಬೆಳಗ್ಗೆ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಬೆಂಗಳೂರಿನ ಮಲ್ಲೇಶ್ವರಂ ನಿವಾಸಿ ಮಂಜುನಾಥ್ (56) ಪೊಲೀಸರ ವಶದಲ್ಲಿರುವ ಆರೋಪಿ ಎಂದು ಗುರುತಿಸಲಾಗಿದೆ. ಮಂಜುನಾಥ್ ಮಂಗಳೂರಿನ ರಥಬೀದಿಯಲ್ಲಿ ಬೆಳಗ್ಗೆ 6.30ರ ಸುಮಾರಿಗೆ ದೊಡ್ಡ ಬ್ಯಾಗನ್ನು ಹೆಗಲ ಮೇಲೆ ಹಾಕಿಕೊಂಡು ಅನುಮಾನಾಸ್ಪದವಾಗಿ ತಿರುಗುತ್ತಿದ್ದ.

ಈ ವೇಳೆ ಗಸ್ತಿನಲ್ಲಿದ್ದ ಬಂದರು ಠಾಣೆ ಪೊಲೀಸ್ ಸಿಬ್ಬಂದಿ ವಿಚಾರಿಸಿ, ಬ್ಯಾಗ್ ಪರಿಶೀಲಿಸಿದಾಗ ಯಾವುದೇ ದಾಖಲೆ ಇಲ್ಲದ ಸುಮಾರು 1 ಕೋಟಿ ರೂ. ಹಣ ಪತ್ತೆಯಾಗಿದೆ. ಹಣ ವಶಕ್ಕೆ ಪಡೆದುಕೊಂಡಿರುವ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಹಣದ ಮೂಲದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಈತನಿಗೆ ಇಷ್ಟು ಪ್ರಮಾಣದ ಹಣ ಎಲ್ಲಿಂದ ಬಂತು. 1 ಕೋಟಿ ರೂ. ಹಣವನ್ನು ಹೊತ್ತು ತಿರುಗುತ್ತಿದ್ದ ಈತನ ಮೂಲದ ಬಗ್ಗೆ ಪೊಲೀಸರು ಸಂಪೂರ್ಣ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)