ಜಿದ್ದಾಜಿದ್ದಿನ ಕಣವಾಗಿದ್ದ ಶಿವಮೊಗ್ಗದಲ್ಲಿ ಮಧುಬಂಗಾರಪ್ಪ ವಿರುದ್ದ ಬಿ.ವೈ.ರಾಘವೇಂದ್ರಗೆ ಭರ್ಜರಿ ಗೆಲುವು

0
114

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಶಿವಮೊಗ್ಗ,ಮೇ 23- ಜಿದ್ದಾಜಿದ್ದಿನ ಕಣವಾಗಿದ್ದ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸುವುದರೊಂದಿಗೆ ತನ್ನ ಪ್ರಾಬಲ್ಯವನ್ನು ಮತ್ತೆ ಮುಂದುವರೆಸಿದೆ.

ಬಿಜೆಪಿ ಅಭ್ಯರ್ಥಿಯಾಗಿ ಸ್ಫರ್ಧಿಸಿದ್ದ ಬಿ.ವೈ.ರಾಘವೇಂದ್ರ ಸುಮಾರು 1,20,000ಕ್ಕೂ ಹೆಚ್ಚಿನ ಅಂತರದಲ್ಲಿ ಗೆಲುವು ಸಾಧಿಸಿ ಮೈತ್ರಿ ಅಭ್ಯರ್ಥಿ ಮಧುಬಂಗಾರಪ್ಪ ಪರಾಭವಗೊಳಿಸಿದ್ದಾರೆ.

ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರ ಪುತ್ರ ಬಿ.ವೈ.ರಾಘವೇಂದ್ರ ಹಾಗೂ ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪನವರ ಪುತ್ರ ಮಧುಬಂಗಾರಪ್ಪ ಅವರ ಸ್ಪರ್ಧೆಯಿಂದಾಗಿ ಶಿವಮೊಗ್ಗ ರಾಜ್ಯದ ಗಮನಸೆಳೆದ ಕ್ಷೇತ್ರವಾಗಿತ್ತು

ಪ್ರಾರಂಭಿಕ ಸುತ್ತಿನಿಂದಲೂ ಬಿ.ವೈ.ರಾಘವೇಂದ್ರ ಮುನ್ನಡೆ ಕಾಯ್ದುಕೊಂಡು ಅಂತಿಮ ಸುತ್ತಿನಲ್ಲಿ 1,20,000ಕ್ಕೂ ಹೆಚ್ಚಿನ ಮತಗಳಿಂದ ಗೆಲುವಿನ ನಗೆ ಬೀರಿದರು.

ಶಿವಮೊಗ್ಗದಲ್ಲಿ ಯಡಿಯೂರಪ್ಪನವರ ಪುತ್ರನನ್ನು ಸೋಲಿಸಲೇಬೇಕೆಂದು ದೋಸ್ತಿ ಪಕ್ಷಗಳ ಮುಖಂಡರು ತಮ್ಮದೇ ಆದ ರಣತಂತ್ರ ರೂಪಿಸಿದ್ದರು.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಮ್ಮಿಶ್ರ ಸರ್ಕಾರದ ಟ್ರಬಲ್ ಶೂಟರ್ ಎಂದೇ ಖ್ಯಾತಿಯಾಗಿರುವ ಸಚಿವ ಡಿ.ಕೆ.ಶಿವಕುಮಾರ್ ಉಸ್ತುವಾರಿ ವಹಿಸಿದ್ದರು. ಯಡಿಯೂರಪ್ಪನವರನ್ನು ತವರು ಜಿಲ್ಲೆಯಲ್ಲೇ ಕಟ್ಟಿ ಹಾಕಿದರೆ ಸರ್ಕಾರ ಅಸ್ಥಿರಗೊಳಿಸುವ ಅವರ ಪ್ರಯತ್ನವನ್ನು ವಿಫಲಗೊಳಿಸಬಹುದೆಂಬ ಕಾರಣಕ್ಕಾಗಿಯೇ ಶಿವಮೊಗ್ಗವನ್ನು ಪ್ರತಿಷ್ಟೆಯಾಗಿ ತೆಗೆದುಕೊಂಡಿದ್ದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)