ಜೆಸಿಐ ಬೈಂದೂರು ಸಿಟಿ ವತಿಯಿಂದ ವಿಶ್ವ ಪರಿಸರ ದಿನಾಚರಣೆ

0
122

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

    

ಬೈಂದೂರು : ಜೆಸಿಐ ಬೈಂದೂರು ಸಿಟಿ, ಯುವ ಸಿಟಿ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಉಡುಪಿ ಹಾಗೂ ಮೂಕಾಂಬಿಕಾ ಕ್ಲಬ್ ಬೈಂದೂರು ಇವರ ಸಂಯೋಜಕತ್ವದಲ್ಲಿ ಮೂಕಾಂಬಿಕಾ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ಈ ಮೂಲಕ ಪರಿಸರ ಸಂರಕ್ಷಣೆ ಕುರಿತಾದ ವಿಚಾರಗೊಷ್ಠಿ ನಡೆಸಲಾಯಿತು. ಹಾಗೂ ಎಲ್ಲಾ ವಿದ್ಯಾರ್ಥಿಗಳಿಗೆ ಹಾಗೂ ಅತಿಥಿಗಳಿಗೆ ಗಿಡಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಸಿಐ ಅಧ್ಯಕ್ಷ ಮಣಿಕಂಠ ಎಸ್. ವಹಿಸಿದ್ದರು, ನೆಹರು ಕೇಂದ್ರದ ಉದಯ ಮರಾಠಿ, ಜೆಸಿರೇಟ್ ಪ್ರಿಯದರ್ಶಿನಿ, ಭಾಸ್ಕರ್ ಬಿಲ್ಲವ ಉಪಸ್ಥಿತರಿದ್ದರು.

ಕುಮಾರಿ ರಶ್ಮೀತಾ ಕಾರ್ಯಕ್ರಮ ನಿರೂಪಿಸಿದರು, ಕುಮಾರಿ ನವ್ಯ ದೇವಾಡಿಗ ಸ್ವಾಗತಿಸಿ ವಂದಿಸಿದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)