ನಿಫಾ ವೈರಸ್ ಭೀತಿ : ಕರಾವಳಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ

0
79

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಮಂಗಳೂರು : ಕೇರಳದಲ್ಲಿ ಆತಂಕ ಸೃಷ್ಟಿಸಿದ್ದ ನಿಫಾ ಜ್ವರದ ಸೋಂಕು ಮತ್ತೆ ಕಂಡು ಬಂದಿರುವ ಹಿನ್ನೆಲೆಯಲ್ಲಿ ಕರ್ನಾಟಕದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲೂ ಆರೋಗ್ಯ ಇಲಾಖೆಯಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಕೇರಳದಿಂದ ಮಂಗಳೂರಿಗೆ ಬಂದು ಹೋಗುವವರ ಸಂಖ್ಯೆ ಹೆಚ್ಚಿರುವುದರಿಂದ ಹಾಗೂ ಆಸ್ಪತ್ರೆಗಳಿಗೆ ರೋಗಿಗಳನ್ನು ದಾಖಲಿಸುವ ಹಿನ್ನೆಲೆಯಲ್ಲಿಯೂ ಮುನ್ನೆಚ್ಚರಿಕೆ ವಹಿಸಲಾಗಿದ್ದು, ಯಾವುದೇ ರೋಗಿಗಳಲ್ಲಿ ನಿಫಾ ಲಕ್ಷಣಗಳು ಕಂಡು ಬಂದಲ್ಲಿ, ಆರೋಗ್ಯ ಇಲಾಖೆಗೆ ತಿಳಿಸಬೇಕು ಎಂದು ಜಿಲ್ಲೆಯ ಎಲ್ಲಾ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗೆ ಸುತ್ತೋಲೆ ಹೊರಡಿಸಲಾಗಿದೆ.

ಕೇರಳದಿಂದ ಮಂಗಳೂರಿಗೆ ರೈಲಿನಲ್ಲಿ ಅಧಿಕ ಮಂದಿ ಪ್ರಯಾಣಿಸುತ್ತಾರೆ. ಇದರಲ್ಲಿ ಜ್ವರ ಹಾಗೂ ಇತರ ಅನಾರೋಗ್ಯ ಬಾಧಿತರು ಸೂಕ್ತ ತಪಾಸಣೆ ನಡೆಸಬೇಕು ಎಂದು ಆರೋಗ್ಯ ಇಲಾಖೆಯಿಂದ ಹೊರಡಿಸಲಾದ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)