ತೆಂಕೊಡಿಗೆ ಸ.ಕಿ.ಪ್ರಾ.ಶಾಲೆ: ನೋಟ್ ಪುಸ್ತಕ, ಸಮವಸ್ತ್ರ, ಶಾಲಾ ಪರಿಕರ ವಿತರಣೆ

0
58

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಕೃಷ್ಣಮೂರ್ತಿ ಮಂಜ ಮಾರಣಕಟ್ಟೆ ಸಾರಥ್ಯದ ಎಂ.ಎಸ್.ಮಂಜ ಚಾರಿಟೇಬಲ್ ಟ್ರಸ್ಟ್ (ರಿ) ಚಿತ್ತೂರು ವತಿಯಿಂದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ತೆಂಕೊಡಿಗೆ ಇಲ್ಲಿನ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ, ಸಮವಸ್ತ್ರ, ಶಾಲಾ ಪರಿಕರ ವಿತರಣೆ ಕಾರ್ಯಕ್ರಮ ಜೂ.10ರಂದು ನಡೆಯಿತು.

ಎಂ.ಎಸ್.ಮಂಜ ಚಾರಿಟೇಬಲ್ ಟ್ರಸ್ಟ್ (ರಿ) ಚಿತ್ತೂರು ಇದರ ಅಧ್ಯಕ್ಷರಾದ ಕೃಷ್ಣಮೂರ್ತಿ ಮಂಜರು ಮಾರಣಕಟ್ಟೆ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ, ಸಮವಸ್ತ್ರ, ಸ್ಕೂಲ್‍ಬ್ಯಾಗ್, ಶಾಲಾ ಪರಿಕರಗಳನ್ನು ವಿತರಿಸಿ ಶುಭ ಹಾರೈಸಿ, ಮುಂದಿನ ದಿನಗಳಲ್ಲಿ ಈ ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಳವಾಗಬೇಕು. ಪರಿಸರದ ವಿದ್ಯಾರ್ಥಿಗಳು ಇದೇ ಶಾಲೆಗೆ ಬರುವಂತೆ ಮಾಡಬೇಕು. ಅವಶ್ಯಕತೆ ಕಂಡು ಬಂದರೆ ಪೂರ್ವ ಪ್ರಾಥಮಿಕ ತರಗತಿಗಳನ್ನು ಆರಂಭಿಸಿ ಎಂದರು.

ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷ ಉಮೇಶ ಮೊಗವೀರ, ವಂಡ್ಸೆ ಗ್ರಾಮ ಪಂಚಾಯತ್ ಅಧ್ಯಕ್ಷ ಉದಯಕುಮಾರ್ ಶೆಟ್ಟಿ, ದಿನಕರ ಉಡುಪ ತೆಂಕೊಡಿಗೆ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ವಂಡಬಳ್ಳಿ ಜಯರಾಮ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯ ಗುಂಡು ಪೂಜಾರಿ ಹರವರಿ, ಸ್ಥಳೀಯ ಹಿರಿಯರಾದ ನಾಗೇಂದ್ರ ಉಡುಪ, ಶಾಲಾ ರಕ್ಷಾ ಸಮಿತಿಯ ಅಧ್ಯಕ್ಷ ವೆಂಕಟೇಶ ಶೆಟ್ಟಿ ಉಪಸ್ಥಿತರಿದ್ದರು.

ಶಾಲೆಯ ಮುಖ್ಯೋಪಾಧ್ಯಾಯಿನಿ ಜ್ಯೋತಿ ಕುಮಾರಿ ಸ್ವಾಗತಿಸಿ, ಶಿಕ್ಷಕ ಉದಯ ಮಾಸ್ತರ್ ಕಾರ್ಯಕ್ರಮ ನಿರ್ವಹಿಸಿದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)