ಸ.ಹಿ.ಪ್ರಾ.ಶಾಲೆ ಚಿತ್ತೂರು: ಎಂ.ಎಸ್.ಮಂಜ ಚಾರಿಟೇಬಲ್ ಟ್ರಸ್ಟ್‍ನಿಂದ ಕಲಿಕಾ ಪರಿಕರ ವಿತರಣೆ

0
64

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಎಂ.ಎಸ್.ಮಂಜ ಚಾರಿಟೇಬಲ್ ಟ್ರಸ್ಟ್ (ರಿ.) ಚಿತ್ತೂರು ವತಿಯಿಂದ ಬೈಂದೂರು ಶೈಕ್ಷಣಿಕ ವಲಯದ ಚಿತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ, ಸಮವಸ್ತ್ರ, ಶಾಲಾ ಚೀಲಗಳ ವಿತರಣಾ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.

ಎಂ.ಎಸ್.ಮಂಜ ಚಾರಿಟೇಬಲ್ ಟ್ರಸ್ಟ್ (ರಿ.) ಚಿತ್ತೂರು ಇದರ ಅಧ್ಯಕ್ಷರು, ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತರು ಆದ ಕೃಷ್ಣಮೂರ್ತಿ ಮಂಜರು ಕೊಡುಗೆಗಳನ್ನು ವಿತರಿಸಿ, ಮಕ್ಕಳ ಭವಿಷ್ಯ ರೂಪಿಸುವಲ್ಲಿ ಪೋಷಕರ ಪಾತ್ರ ಬಹು ಮುಖ್ಯ. ಮಕ್ಕಳಿಗೆ ಒಳ್ಳೆಯ ಶಿಕ್ಷಣ ನೀಡಿ, ಒಳ್ಳೆಯ ಸಂಸ್ಕøತಿ, ಸಂಸ್ಕಾರ ಕಲಿಸಿ ಸತ್ಪ್ರಜೆಗಳನ್ನಾಗಿ ರೂಪಿಸಬೇಕು. ಹಾಗೆಯೇ ವಿದ್ಯಾಸಂಸ್ಥೆಗಳ ಬಗ್ಗೆ ಅಭಿಮಾನ ಹೊಂದಿ ಶಾಲಾಭಿವೃದ್ದಿಯಲ್ಲಿ ಸಮರ್ಪಣಾ ಭಾವದಿಂದ ತೊಡಗಿಸಿಕೊಳ್ಳಿ ಎಂದು ಪೋಷಕರಿಗೆ ಕಿವಿಮಾತು ಹೇಳಿದರು.

ಜಿಲ್ಲಾ ಪಂಚಾಯತ್ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಬಾಬು ಶೆಟ್ಟಿ ತಗ್ಗರ್ಸೆ ಈ ಶಾಲೆಯ ಅಭಿವೃದ್ದಿ ಕುರಿತು ಪ್ರಶಂಸೆಯ ಮಾತುಗಳನ್ನಾಡಿದರು. ಎಸ್.ಡಿ.ಎಂ.ಸಿ ಅಧ್ಯಕ್ಷ ದಿವಾಕರ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಪಂಚಾಯತ್ ಸದಸ್ಯ ಉದಯ ಜಿ.ಪೂಜಾರಿ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯ ವಂಡಬಳ್ಳಿ ಜಯರಾಮ ಶೆಟ್ಟಿ, ಸ್ಥಳೀಯ ವೈದ್ಯರಾದ ಡಾ|ಅತುಲ್ ಕುಮಾರ್ ಶೆಟ್ಟಿ, ಸ್ಥಳೀಯ ಗ್ರಾ.ಪಂ.ಸದಸ್ಯರು ಹಾಗೂ ಹಳೆವಿದ್ಯಾರ್ಥಿ ಸಂಘಧ ಅಧ್ಯಕ್ಷ ಪ್ರದೀಪ ಶೆಟ್ಟಿ, ದಾನಿಗಳಾದ ಶಂಕರ ಭಟ್ ಮಾರಣಕಟ್ಟೆ, ಚಿತ್ತೂರು ಪ್ರೌಢಶಾಲಾ ಕಾರ್ಯಧ್ಯಕ್ಷ ರವಿರಾಜ್ ಶೆಟ್ಟಿ, ರಾಮಚಂದ್ರ ಮಂಜರು ಮಾರಣಕಟ್ಟೆ ಉಪಸ್ಥಿತರಿದ್ದರು.

ಶಾಲೆಯ ಮುಖ್ಯೋಪಾಧ್ಯಾಯರಾದ ಆನಂದ ಶೆಟ್ಟಿ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಬಾಲಕೃಷ್ಣ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಹಶಿಕ್ಷಕ ಗಣಪತಿ ಕಿಣಿ, ನಾರಾಯಣ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಕ ಗೋವಿಂದ ಶೆಟ್ಟಿ ವಂದಿಸಿದರು. ಪೋಷಕರು, ಎಸ್.ಡಿ.ಎಂ.ಸಿ ಸದಸ್ಯರು, ಹಳೆ ವಿದ್ಯಾರ್ಥಿಗಳು, ಗೌರವ ಶಿಕ್ಷಕಿಯರು, ಅಂಗನವಾಡಿ ಕಾರ್ಯಕರ್ತೆಯರು ಹಾಜರಿದ್ದರು.

ವರದಿ : ನಾಗರಾಜ ವಂಡ್ಸೆ

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)