ಮಂಗಳೂರಿನಲ್ಲಿ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ವ್ಯಕ್ತಿ ಬಂಧನ

0
208

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಮಂಗಳೂರು : ನ್ಯೂಜಿಲೆಂಡ್ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಕ್ರಿಕೆಟ್ ಪಂದ್ಯದ ಬೆಟ್ಟಿಂಗ್ ನಡೆಸುತ್ತಿದ್ದ ಬುಕ್ಕಿಯೊಬ್ಬನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಈತ ಮೊಬೈಲ್ ಆಪ್ ಮೂಲಕ ಬೆಟ್ಟಿಂಗ್ ನಡೆಸುತ್ತಿದ್ದ ಎಂದು ಆರೋಪಿಸಲಾಗಿದ್ದು, ನಗರದ ಬರ್ಕೆ ಪೊಲೀಸರು ನಿನ್ನೆ ರಾತ್ರಿ ಬಂಧಿಸಿದ್ದಾರೆ. ಬಂಧಿತನನ್ನು ಬೋಳೂರು ಮಿಶನ್ ಕಾಂಪೌಂಡ್ ನಿವಾಸಿ ಸುದೇಶ್ (26) ಎಂದು ಗುರುತಿಸಲಾಗಿದೆ.

ಆರೋಪಿಯು ನಿನ್ನೆ ನಡೆದ ವಿಶ್ವಕಪ್ ಕ್ರಿಕೆಟ್‌ನ ನ್ಯೂಜಿಲೆಂಡ್ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಪಂದ್ಯಕ್ಕೆ ಸಂಬಂಧಿಸಿ ಸಾರ್ವಜನಿಕರಿಂದ ಹಣ ಸಂಗ್ರಹಿಸಿ ಬೆಟ್ಟಿಂಗ್ ನಡೆಸುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಖಚಿತ ಮಾಹಿತಿಯನ್ನು ಆಧರಿಸಿ ಪೊಲೀಸರು ದಾಳಿ ನಡೆಸಿ ಆರೋಪಿ ಸುದೇಶ್ ‌ನನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಯಿಂದ ಕ್ರಿಕೆಟ್ ಬೆಟ್ಟಿಂಗ್ ‌ಗೆ ಬಳಸುತ್ತಿದ್ದ ಎರಡು ಮೊಬೈಲ್ ಫೋನ್‌ಗಳು ಹಾಗೂ ಬೆಟ್ಟಿಂಗ್ ಮೂಲಕ ಸಾರ್ವಜನಿಕರಿಂದ ಸಂಗ್ರಹಿಸಿದ 90 ಸಾವಿರ ರೂಪಾಯಿ ನಗದು ಸೇರಿದಂತೆ ಒಟ್ಟು 1.15 ಲಕ್ಷ ರೂಪಾಯಿ ಸೊತ್ತನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)