ಬೀಸಿನಪಾರೆ ಶ್ರೀ ಮೂಕಾಂಬಿಕಾ ದೇವಳದ ಪ್ರೌಢಶಾಲೆ ವಿದ್ಯಾರ್ಥಿ ಸಂಸತ್ ಉದ್ಘಾಟನೆ

0
71

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (2) ಸಮ್ಮತ (0) ಅಸಮ್ಮತ (1) ಖಂಡಿಸುವೆ (1) ಅಭಿಪ್ರಾಯವಿಲ್ಲ (0)

ಶ್ರೀ ಮೂಕಾಂಬಿಕಾ ದೇವಳದ ಪ್ರೌಢಶಾಲೆ ಬೀಸಿನಪಾರೆ ಇಲ್ಲಿನ  2019-20ನೇ ಸಾಲಿನ ವಿದ್ಯಾರ್ಥಿ ಸರಕಾರವನ್ನು ಶ್ರೀ ಮೂಕಾಂಬಿಕಾ ದೇವಳದ ಕಾರ್ಯನಿರ್ವಹಣಾಧಿಕಾರಿಗಳಾದ ಎಚ್.ಹಾಲಪ್ಪ ದೀಪ ಬೆಳಗಿಸಿ ಉದ್ಘಾಟಿಸಿದರು ಬಳಿಕ ಮಾತನಾಡಿದ ಅವರು ವಿದ್ಯಾರ್ಥಿ ಸರಕಾರವು ವಿದ್ಯಾರ್ಥಿ ದೆಸೆಯಲ್ಲಿಯೇ ನಾಯಕತ್ವದ ಗುಣವನ್ನು ರೂಢಿಸಿಕೊಳ್ಳಲು ಹಾಗೂ ಪ್ರಜಾಪ್ರಭುತ್ವ ಮೌಲ್ಯಗಳಿಗೆ ತಳಹದಿಯಾಗುತ್ತದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮೂಕಾಂಬಿಕಾ ದೇವಳದ ಆಡಳಿತ ಮಂಡಳಿಯ ಅಧ್ಯಕ್ಷ ಹರೀಶ್ ಕುಮಾರ್ ಎಂ ಶೆಟ್ಟಿ ಮಾತನಾಡಿ ಶಿಸ್ತು, ಜವಬ್ದಾರಿ , ಸಮಯಪಾಲನೆಯಂತಹ ಗುಣಗಳನ್ನು ರೂಢಿಸಿಕೊಂಡು ಶ್ರೀ ದೇವಳದಿಂದ ಸಿಗುವ ಸೌಲಭ್ಯವನ್ನು ಸದಪಯೋಗ ಪಡೆಸಿಕೊಳ್ಳುವಂತೆ ಕಿವಿಮಾತು ಹೇಳಿದರು.

ಈ ಸಂದರ್ಭದಲ್ಲಿ ದೇವಳದ ಆಡಳಿತ ಮಂಡಳಿಯ ಸದಸ್ಯರಾದ ರಮೇಶ್ ಗಾಣಿಗ, ನರಸಿಂಹ ಹಳಗೇರಿ, ಸ್ಥಳೀಯ ವೇ||ಮೂ|| ಸೂರ್ಯನಾರಾಯಣ ಭಟ್ ಹಾಗೂ ಎಲ್ಲಾ ಶಿಕ್ಷೇತರ ಸಿಬ್ಬಂದಿಗಳು ಹಾಜರಿದ್ದರು.

ಮುಖ್ಯೋಪಾಧ್ಯಾಯ ರತ್ನಾಕರ ದೇವಾಡಿಗ ಸ್ವಾಗತಿಸಿ ಪ್ರಾಸ್ತಾವಿಸಿ, ಶಿಕ್ಷಕ ಗಣೇಶ್ ನಿರೂಪಿಸಿದರು, ದೈಹಿಕ ಶಿಕ್ಷಕ ಸತೀಶ್ ವಂದಿಸಿದರು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (2) ಸಮ್ಮತ (0) ಅಸಮ್ಮತ (1) ಖಂಡಿಸುವೆ (1) ಅಭಿಪ್ರಾಯವಿಲ್ಲ (0)