ಕಾರ್ಕಳ ಕ್ಷೇತ್ರದ ಮಾಜಿ ಶಾಸಕ ಗೋಪಾಲ ಭಂಡಾರಿ ಹೃದಯಾಘಾತದಿಂದ ನಿಧನ

0
109

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಮಂಗಳೂರು : ಉಡುಪಿ ಜಿಲ್ಲೆಯ ಕಾರ್ಕಳ ಕ್ಷೇತ್ರದ ಮಾಜಿ ಶಾಸಕ ಗೋಪಾಲ ಭಂಡಾರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಇವರಿಗೆ 66 ವರ್ಷ ವಯಸ್ಸಾಗಿದ್ದು, ಗುರುವಾರ ಮಧ್ಯಾಹ್ನ ಬೆಂಗಳೂರಿಂದ ಮಂಗಳೂರಿಗೆ ಕೆಎಸ್‌ಆರ್‌ಟಿಸಿ ಬಸ್‍ ನಲ್ಲಿ ಹೋಗುತ್ತಿದ್ದಾಗ ಅಲ್ಲಿಯೇ ಹೃದಯಾಘಾತವಾಗಿ ಮೃತಪಟ್ಟಿದ್ದು, ರಾತ್ರಿ 10.40ರ ವೇಳೆಗೆ ಮಂಗಳೂರು ಬಸ್ ನಿಲ್ದಾಣ ತಲುಪಿದ ವೇಳೆ ಶಾಸಕರನ್ನು ಕಂಡೆಕ್ಟರ್ ಎಬ್ಬಿಸಲು ಬಂದಾಗ ಅವರು ಯಾವುದೇ ಪ್ರತಿಕ್ರಿಯೆ ನೀಡದ ಹಿನ್ನಲೆ ಪೊಲೀಸರ ಸಹಾಯದಿಂದ ತಕ್ಷಣ ಅವರನ್ನು ವೆನ್ಲಾಕ್‌ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅವರು ಈಗಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಇವರು, 1998 ಮತ್ತು 2008ರಲ್ಲಿ ಕಾರ್ಕಳದಲ್ಲಿ ಎರಡು ಬಾರಿ ಕಾಂಗ್ರೆಸ್ ಪಕ್ಷದಲ್ಲಿ ಶಾಸಕರಾಗಿದ್ದರು. ಕಳೆದ ಬಾರಿ ಬಿಜೆಪಿ ಅಭ್ಯರ್ಥಿ ಸುನಿಲ್ ಕುಮಾರ್ ವಿರುದ್ಧ ಸೋಲು ಕಂಡಿದ್ದರು. ಸದ್ಯ ಕೆಪಿಸಿಸಿ ಕಾರ್ಯದರ್ಶಿ ಆಗಿದ್ದರು. ಇಂದು ಬೆಳಗ್ಗೆ 9 ಗಂಟೆಗೆ ಹುಟ್ಟೂರು ಹೆಬ್ರಿಗೆ ಪಾರ್ಥಿವ ಶರೀರವನ್ನು ಕೊಂಡೊಯ್ದು ಅಂತ್ಯಕ್ರಿಯೆ ನಡೆಸಲಾಗುತ್ತದೆ ಎಂಬುದಾಗಿ ತಿಳಿದುಬಂದಿದೆ.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)