ಬೈಂದೂರು : ಸಂಘಟನಾ ಪರ್ವ ಸದಸ್ಯತಾ ಅಭಿಯಾನ 2019

0
177

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (2) ಸಮ್ಮತ (0) ಅಸಮ್ಮತ (0) ಖಂಡಿಸುವೆ (1) ಅಭಿಪ್ರಾಯವಿಲ್ಲ (0)

ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲವತಿಯಿಂದ ಸದಸ್ಯತಾ ಅಭಿಯಾನದ ಕಾರ್ಯಾಗಾರವು ಅಣ್ಣಪ್ಪಯ್ಯ ಸಭಾ ಭವನ ತ್ರಾಸಿ ಯಲ್ಲಿ ನಡೆಯಿತು.

ಕಾರ್ಯಾಗಾರದ ಉದ್ಘಾಟನೆಯನ್ನು ಬೈಂದೂರು ಕ್ಷೇತ್ರದ ಶಾಸಕರಾದ ಬಿ. ಎಂ. ಸುಕುಮಾರ ಶೆಟ್ಟಿಯವರು ನೆರವೇರಿಸಿದರು.
ಸದಸ್ಯತಾ ಅಭಿಯಾನದ ಮಹತ್ವ ಮತ್ತು ಉದ್ದೇಶವನ್ನು ವಿಧಾನ ಪರಿಷತ್ನ ವಿರೋಧ ಪಕ್ಷದ ನಾಯಕರಾದ ಕೋಟ ಶ್ರೀನಿವಾಸ್ ಪೂಜಾರಿ ಅವರು ಹೇಳಿದರು.

ಮಂಗಳೂರು ವಿಭಾಗ ಪ್ರಭಾರಿಗಳಾದ ಉದಯ ಕುಮಾರ್ ಶೆಟ್ಟಿ, ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರ್ ನವೀನ್ ಶೆಟ್ಟಿ, ಕ್ಷೇತ್ರ ಅಧ್ಯಕ್ಷರಾದ ಸದಾನಂದ ಉಪ್ಪಿನಕುದ್ರು ಪ್ರದಾನ ಕಾರ್ಯದರ್ಶಿ ದೀಪಕ್ ಕುಮಾರ್ ಶೆಟ್ಟಿ, ಬಾಲಚಂದ್ರ ಭಟ್, ಅಭಿಯಾನ ಸಂಚಾಲಕರಾದ ಡಾ|| ಅತುಲ್ ಕುಮಾರ್ ಶೆಟ್ಟಿ, ಸಹ ಸಂಚಾಲಕರಾದ ಪ್ರಿಯದರ್ಶಿನಿ ದೇವಾಡಿಗ ಹಾಗೂ ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (2) ಸಮ್ಮತ (0) ಅಸಮ್ಮತ (0) ಖಂಡಿಸುವೆ (1) ಅಭಿಪ್ರಾಯವಿಲ್ಲ (0)