ನಾವುಂದ: ಪರಿಸರ ಮಾಹಿತಿ ಹಾಗೂ ಸಸಿ ವಿತರಣೆ ಕಾರ್ಯಕ್ರಮ

0
84

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

 

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಾವುಂದ, ಇಲ್ಲಿ ಇತ್ತೀಚೆಗೆ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ಕಿರಿಮಂಜೇಶ್ವರ ಘಟಕ, ಇದರ ವತಿಯಿಂದ ಪರಿಸರ ಮಾಹಿತಿ ಹಾಗೂ ಸಸಿ ವಿತರಣೆ ಕಾರ್ಯಕ್ರಮ ನಡೆಯಿತು.

ನಾವುಂದ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ನರಸಿಂಹ ದೇವಾಡಿಗ ಅವರು ಕಾರ್ಯಕ್ರಮದ ಉದ್ಘಾಟನೆ ನಡೆಸಿ, ವಿದ್ಯಾರ್ಥಿಗಳಿಗೆ ಸಸಿ ವಿತರಣೆ ಮಾಡಿದರು.

ಶಾಲಾ ಮುಖ್ಯೋಪಾಧ್ಯಾಯರಾದ ಆನಂದ ಜಿ. ಯವರು ಮಕ್ಕಳಿಗೆ ಪರಿಸರ, ಪರಿಸರ ಮಾಲಿನ್ಯ, ಪರಿಸರ ಸಂರಕ್ಷಣೆ ಹಾಗೂ ಜಲ ಸಂರಕ್ಷಣೆ, ಪ್ಲಾಸ್ಟಿಕ್ ನ ಮಿತ ಬಳಕೆ- ಪುನರ್ಬಳಕೆಯ ಅನಿವಾರ್ಯತೆಯನ್ನು ವಿವರಿಸಿ, ಮಾಹಿತಿ ನೀಡಿದರು. ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಶ್ರೀ ಮಹಾಬಲೇಶ್ವರ ರೈ ಇವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೃಷಿ ಅಧಿಕಾರಿಗಳಾದ ಮಂಜುನಾಥರವರು, ಕಿರಿಮಂಜೇಶ್ವರ ವಲಯ ಮೇಲ್ವಿಚಾರಕರಾದ ಶ್ರೀಮತಿ ರುಕ್ಮಿಣಿ, ಸೇವಾ ಪ್ರತಿನಿಧಿಗಳಾದ ಶ್ರೀಮತಿ ನಾಗರತ್ನ, ಎಸ್.ಡಿ.ಎಂ.ಸಿ. ಸದಸ್ಯರಾದ ಸತ್ಯನಾರಾಯಣ ಅವರು ಉಪಸ್ಥಿತರಿದ್ದರು. ಶಾಲಾ ಅಧ್ಯಾಪಕ ವೃಂದ, ವಿದ್ಯಾರ್ಥಿ ವೃಂದ ಹಾಗೂ ಪೋಷಕರು ಹಾಜರಿದ್ದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)