ಎಡಮೊಗೆ : ಹೆಣ್ಣು ಮಗುವಿನ ಕಡ್ನಾಪ್ ಪ್ರಕರಣ – ಮಗುವಿನ ಶವ ನದಿಯಲ್ಲಿ ಪತ್ತೆ

0
111

ಹೆಚ್ಚಿನ ಓದುಗರು ಈ ಸುದ್ದಿಯನ್ನು ಖಂಡಿಸುವೆ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (2) ಅಭಿಪ್ರಾಯವಿಲ್ಲ (0)

ಉಡುಪಿ: ಕುಂದಾಪುರ ತಾಲೂಕಿನ ಎಡಮೊಗೆ ಗ್ರಾಮದಲ್ಲಿ ಗುರುವಾರ ಮುಂಜಾನೆ 4 ಗಂಟೆಯ ಸುಮಾರಿಗೆ ಹೆಣ್ಣು ಮಗುವಿನ ಅಪಹರಣ ಪ್ರಕರಣ ಎಂಬ ಬಗ್ಗೆ ಸುದ್ದಿಯಾಗಿತ್ತು. ಆದರೆ ಇದೀಗ ಮಗುವಿನ ಶವ ಕುಬ್ಜಾ ನದಿಯಲ್ಲಿ ಪತ್ತೆಯಾಗಿದೆ.

ಸಾನ್ವಿಕಾ ಮೃತ ಮಗು. ಸಂತೋಷ್ ನಾಯ್ಕ ಮತ್ತು ರೇಖಾ ದಂಪತಿ ಮಗು ಅಪಹರಣ ಆಗಿತ್ತೆಂದು ಪೊಲೀಸರಿಗೆ ದೂರು ನೀಡಲಾಗಿತ್ತು. ದೂರು ನೀಡಿ ಒಂದು ದಿನ ಆಗುವಷ್ಟರಲ್ಲಿ ಹೆಣ್ಣು ಮಗುವಿನ ಮೃತದೇಹ ಕುಬ್ಜಾ ನದಿಯಲ್ಲಿ ಪತ್ತೆಯಾಗಿದೆ.

ಅಪಹರಣದ ಕಥೆ ಕಟ್ಟಿದ್ಳಾ ತಾಯಿ? : ರೇಖಾ ಇಬ್ಬರು ಮಕ್ಕಳ ಜೊತೆ ಆತ್ಮಹತ್ಯೆ ಮಾಡಿಕೊಳ್ಳಲು ನದಿಗೆ ಹಾರಿದ್ದಾರೆ ಎನ್ನಲಾಗಿದೆ. ಪ್ರಾಣ ಭಯದಿಂದ ಮಗ ಮತ್ತು ತಾಯಿ ನೀರಿಂದ ಮೇಲೆ ಬಂದಿರಬಹುದು. ಒಂದು ವರ್ಷ ಮೂರು ತಿಂಗಳ ಮಗು ನೀರಿನ ರಭಸಕ್ಕೆ ಕೊಚ್ಚಿ ಹೋಗಿದೆ. ಗಂಡ ಬಂದ ಸಂದರ್ಭದಲ್ಲಿ ಭಯಗೊಂಡು ಅಪಹರಣದ ಕಥೆ ಕಟ್ಟಿದ್ದಾಳೆ ಎನ್ನಲಾಗಿದೆ. ವಿಡಿಯೋವೊಂದಲ್ಲಿ ತಂದೆ ಕಣ್ಣೀರಿಡುತ್ತಿದ್ದರೆ, ತಾಯಿ ಭಯದಲ್ಲಿರುವುದು ಕಂಡುಬಂದಿದೆ.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಖಂಡಿಸುವೆ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (2) ಅಭಿಪ್ರಾಯವಿಲ್ಲ (0)