ಬೈಂದೂರು ವಲಯದ ತಾಲೂಕು ಮಟ್ಟದ ಚದುರಂಗ ಸ್ಪರ್ಧೆ ಉದ್ಘಾಟನೆ

0
117

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಸಾರ್ವಜನಿಕ ಶಿಕ್ಷಣ ಇಲಾಖೆ, ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು ಹಾಗೂ ವಿಜಯ ಮಕ್ಕಳ ಕೂಟ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ ಆತ್ರಾಡಿ, ವಂಡ್ಸೆ ಇವರ ಆಶ್ರಯದಲ್ಲಿ ಬೈಂದೂರು ವಲಯದ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ತಾಲೂಕು ಮಟ್ಟದ ಚದುರಂಗ ಸ್ಪರ್ಧೆ ಜು.11 ಆತ್ರಾಡಿ ವಿಜಯ ಮಕ್ಕಳ ಕೂಟದ ಆತ್ರಾಡಿ ಸಂಜೀವಿ ಭಾಸ್ಕರ ಶೆಟ್ಟಿ ಆಡಿಟೋರಿಯಂನಲ್ಲಿ ನಡೆಯಿತು.

ಕಾರ್ಯಕ್ರಮವನ್ನು ವಂಡ್ಸೆ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶಾರದಾ ರುದ್ರಯ್ಯ ಆಚಾರ್ಯ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ಪಂಚಾಯತ್ ಸದಸ್ಯ ಉದಯ ಜಿ.ಪೂಜಾರಿ ವಹಿಸಿದ್ದರು. ನಿವೃತ್ತ ಮುಖ್ಯೋಪಾಧ್ಯಾಯರು, ವೆಂಕಮ್ಮ ರಾಮಣ್ಣ ಶೆಟ್ಟಿ ಟ್ರಸ್ಟ್ ಕಾರ್ಯದರ್ಶಿ ಬಿ.ರಾಜೀವ ಶೆಟ್ಟಿ, ಬೈಂದೂರು ವಲಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ರಾಜೀವ ಶೆಟ್ಟಿ, ಚೆಸ್ ಅಸೋಸಿಯೇಶನ್ ಕಾರ್ಯದರ್ಶಿ ಬಾಬು ಜೆ.ಪೂಜಾರಿ, ಗ್ರೇಡ್ 1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಸತ್ಯನಾರಾಯಣ ಜಿ., ವಿ.ಎಂ.ಕೆ ಪೋಷಕ ಸಂಘದ ಅಧ್ಯಕ್ಷ ಡಾ|ರಾಜೇಶ ಬಾಯರಿ ಉಪಸ್ಥಿತರಿದ್ದರು.

ಸಂಸ್ಥೆಯ ಸಂಚಾಲಯ ಸುಭಾಶ್ಚಂದ್ರ ಶೆಟ್ಟಿ ಸ್ವಾಗತಿಸಿದರು.ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಚಂದ್ರಶೇಖರ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮುಖ್ಯೋಪಾಧ್ಯಾಯಿನಿ ದೀಪಿಕಾ ಸುಭಾಸ್ ಕಾರ್ಯಕ್ರಮ ನಿರ್ವಹಿಸಿ, ಅನಿತಾ ಶೆಟ್ಟಿ ವಂದಿಸಿದರು.

ವರದಿ : ನಾಗರಾಜ ವಂಡ್ಸೆ

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)