ಬೈಂದೂರು : ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆಯು ಪ್ರಯುಕ್ತ ಹ್ವಾಯ್ ಬನಿ ಕೂಕಣಿ -ಸ್ನೇಹ ಸಮ್ಮೀಲನ-2019 ಕಾರ್ಯಕ್ರಮ

0
116

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (1) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

     

ಕುಂದಾಪ್ರ ಕನ್ನಡ ಬಳಗ ಗಲ್ಪ್ ಇದರ ವತಿಯಿಂದ ವಿಶ್ವ ಕುಂದಾಪ್ರ ದಿನಾಚರಣೆಯು ಪ್ರಯುಕ್ತ ಹ್ವಾಯ್ ಬನಿ ಕೂಕಣಿ -ಸ್ನೇಹ ಸಮ್ಮೀಲನ-2019 ಕಾರ್ಯಕ್ರಮ ಬೈಂದೂರು ಹೋಟೆಲ್ ಅಂಬಿಕಾ ಇಂಟರ್ ನ್ಯಾಷನಲ್ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಬೈಂದೂರು ಶಾಸಕರಾದ ಬಿ.ಎಂ ಸುಕುಮಾರ ಶೆಟ್ಟಿ ಉದ್ಘಾಟಿಸಿದರು. ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಪ್ ಇದರ ಅಧ್ಯಕ್ಷ ಸಾಧನ್‍ದಾಸ್ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಅಂತರಾಷ್ಟ್ರೀಯ ಜಾದೂಗಾರ ಓಂ ಗಣೇಶ ಉಪ್ಪುಂದ, ಬೈಂದೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಜನಾರ್ಧನ ಮರವಂತೆ, ರಾಷ್ಟ್ರಪ್ರಶಸ್ತಿ ವಿಜೇತ,ಚಲನಚಿತ್ರ ನಿರ್ಮಾಪಕ ಎಸ್.ನಿತ್ಯಾನಂದ ಪೈ, ಮಾಜಿ ಜಿ.ಪಂ ಅಧ್ಯಕ್ಷ ಎಸ್.ರಾಜು ಪೂಜಾರಿ, ತಾ.ಪಂ ಸದಸ್ಯ ರಾಜು ದೇವಾಡಿಗ ತ್ರಾಸಿ, ಶೀನ ದೇವಾಡಿಗ ದುಬೈ,ಪ್ರಕಾಶ್ ಬೊರೋಟ್ಟೋ ದುಬೈ,ಉದ್ಯಮಿ ರಿಯಾಜ್ ಅಹ್ಮದ್,ಉದ್ಯಮಿ ಜಯಾನಂದ ಹೋಬಳಿದಾರ್, ರಿಚರ್ಡ್ ರೆಬೆಲ್ಲೋ, ಸ.ಪ್ರ.ದ ಕಾಲೇಜಿನ ಸಹಾಯಕ ಪ್ರಾದ್ಯಾಪಕಿ ಲತಾ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಬೈಂದೂರು ತಾಲೂಕು ಹೋರಾಟ ಸಮಿತಿ ಅಧ್ಯಕ್ಷರು ಹಿರಿಯರಾದ ರೋ.ಜಗನ್ನಾಥ ಶೆಟ್ಟಿಯವರನ್ನು ಸಮ್ಮಾನಿಸಲಾಯಿತು ಹಾಗೂ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ವಿದ್ಯಾನಿಧಿ, ದತ್ತು ಸ್ವೀಕಾರ, ಕುಂದಾಪ್ರ ಕನ್ನಡ ಹರಟೆ ಹಾಗೂ ಕುಂದಾಪ್ರ ಮನೋರಂಜನಾ ಕಾರ್ಯಕ್ರಮಗಳು ನಡೆಯಿತು.

ಬಹ್ರೈನ್ ಕನ್ನಡ ಸಂಘದ ಅಧ್ಯಕ್ಷ ಸುಧಾಕರ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಭಾಗ್ಯ ಸಾಧನದಾಸ್ ಸಮ್ಮಾನ ಪತ್ರ ವಾಚಿಸಿದರು. ಸುಬ್ರಹ್ಮಣ್ಯ ಹೆಬ್ಬಾಗಿಲು ಸ್ವಾಗತಿಸಿದರು. ಪತ್ರಕರ್ತ ಅರುಣ ಕುಮಾರ್ ಶಿರೂರು ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (1) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)