370 ನೇ ವಿಧಿ ಮತ್ತು 35(ಎ) ರದ್ದು: ಉಡುಪಿಯಲ್ಲಿ ವಿಶೇಷ ರೀತಿಯಲ್ಲಿ ಸಂಭ್ರಮಾಚರಣೆ

0
32

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

 

ಜಮ್ಮು ಮತ್ತು ಕಾಶ್ಮೀರಕ್ಕೆ 370ನೇ ವಿಧಿ ಮತ್ತು 35(ಎ) ಪರಿಚ್ಛೇದದಲ್ಲಿ ನೀಡಲಾಗಿದ್ದ ವಿಶೇಷಾಧಿಕಾರ ಸ್ಥಾನಮಾನವನ್ನು ರದ್ದು ಮಾಡಿರುವ ಭಾರತ ಸರಕಾರದ ಐತಿಹಾಸಿಕ ನಿರ್ಧಾರವನ್ನು ಸ್ವಚ್ಛ ಭಾರತ್ ಫ್ರೆಂಡ್ಸ್ ಮತ್ತು ಜೆಸಿಐ ಉಡುಪಿ ಸಿಟಿ ವತಿಯಿಂದ ಇಂದು ಸಂಜೆ ಉಡುಪಿ ಜಿಲ್ಲೆಯ ಅಜ್ಜರಕಾಡು ಹುತಾತ್ಮ ಸ್ಮಾರಕದಲ್ಲಿ ನಡೆಯಿತು. ಭಾರತೀಯ ನೌಕಾ ಪಡೆಯ ನಿವೃತ್ತ ಯೋಧ ಗಣೇಶ್ ರಾವ್ ಅವರು ಮಾತನಾಡುತ್ತಾ, ಜಮ್ಮು ಕಾಶ್ಮೀರದಲ್ಲಿ ಅಭಿವೃದ್ಧಿಯ ನೂತನ ಅಧ್ಯಾಯವು ತೆರೆದಿದೆ. ಅಲ್ಲಿಯ ಜನರು ಪ್ರತ್ಯೇಕತಾವಾದಿಗಳ ತಾಳಕ್ಕೆ ಕುಣಿಯುವ ಬದಲಿಗೆ ದೇಶದ ಐಕ್ಯತೆಯನ್ನು ಬಯಸಿರುವುದು ಮಹತ್ವದ ಬೆಳವಣಿಗೆ ಎಂದರು.

ಜೆಸಿಐ ವಲಯ ಕಾರ್ಯದರ್ಶಿ ರಾಘವೇಂದ್ರ ಪ್ರಭು ಕರ್ವಾಲು ಹಾಗೂ ಉದಯ ನಾಯ್ಕ್ ವಿಧಿಯ ರದ್ದತಿ ನಂತರ ಆಗುವಂತಹ ಪರಿಣಾಮಗಳ ಬಗ್ಗೆ ಮಾತನಾಡಿದರು. ಮಾಜಿ ಸೈನಿಕರಾದ ಗೋಪಾಲಕೃಷ್ಣ, ವಾದಿರಾಜ್ ಹೆಗ್ಡೆ, ಶಿಕ್ಷಣ ಸಂಪನ್ಮೂಲ ಕೇಂದ್ರದ ಜಿಲ್ಲಾ ಸಂಯೋಜಕ ವಿವೇಕ್, ಹಿರಿಯ ನಾಗರಿಕ ವೇದಿಕೆ ಅಧ್ಯಕ್ಷ , ಸದಾನಂದ ಹೆಗ್ಡೆ, ರಕ್ಷಿತ್ ಕುಮಾರ್ ವಂಡ್ಸೆ, ವೀಕ್ಷಿತ್ ಮುಂತಾದವರು ಉಪಸ್ಥಿತರಿದ್ದರು.
ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಸಿಗಳನ್ನು ನೆಟ್ಟು ಸಿಹಿ ಹಂಚುವ ಮೂಲಕ ಸಂಭ್ರಮಾಚರಣೆ ನಡೆಯಿತು.

ಜೆಸಿಐ ಉಡುಪಿ ಸಿಟಿ ಅಧ್ಯಕ್ಷ ಜಗದೀಶ್ ಶೆಟ್ಟಿ ಸ್ವಾಗತಿಸಿ ವಂದಿಸಿದರು. ಗಣೇಶ್ ಪ್ರಸಾದ್ ನಿರೂಪಿಸಿದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)